ಸ್ಯಾಂಡಲ್‌ವುಡ್‌ನ‌ ಇಯರ್‌ ಎಂಡ್‌ ಲೆಕ್ಕಾಚಾರ ಶುರು

Team Udayavani, Nov 21, 2019, 4:23 PM IST

Avane-srimannarayana

ವರ್ಷಾಂತ್ಯ ಹತ್ತಿರವಾಗುತ್ತಿದ್ದಂತೆ ಗಾಂಧಿನಗರದಲ್ಲಿ ಸಿನಿಮಾ ಚಟುವಟಿಕೆಗಳು ಇನ್ನಷ್ಟು ಗರಿಗೆದರಿದೆ. ಬಿಗ್‌ ಬಜೆಟ್‌ ಚಿತ್ರಗಳು ರಿಲೀಸ್‌ ಆಗುತ್ತಿವೆ, ಬಿಗ್‌ ಸ್ಟಾರ್ ಚಿತ್ರಗಳು ಬರುತ್ತಿವೆ, ಥಿಯೇಟರ್‌ ಪ್ರಾಬ್ಲಿಂ ಅಂತ ಕಳೆದ ಕೆಲ ತಿಂಗಳಿನಿಂದ ಬಿಡುಗಡೆಯನ್ನು ಮುಂದೂಡುತ್ತಾ ಬಂದಿರುವ ಅನೇಕ ಚಿತ್ರಗಳು, ಅದರಲ್ಲೂ ಬಹುತೇಕ ಹೊಸಬರ ಚಿತ್ರಗಳು ಇನ್ನು ನಾಲ್ಕೈದು ವಾರದೊಳಗೆ ತೆರೆಗೆ ಬರಲೇ ಬೇಕಾದ ಅನಿವಾರ್ಯತೆಗೆ ಸಿಲುಕಿಕೊಂಡಿವೆ.

ಚಿತ್ರರಂಗದ ಅಂಕಿ-ಅಂಶಗಳ ಪ್ರಕಾರ ಇಲ್ಲಿಯವರೆಗೆ ಕನ್ನಡದಲ್ಲಿ ಸುಮಾರು 170 ಚಿತ್ರಗಳು (ಡಬ್ಬಿಂಗ್‌ ಕನ್ನಡ ಚಿತ್ರಗಳನ್ನು ಹೊರತುಪಡಿಸಿ), ಕನ್ನಡ ಚಿತ್ರರಂಗಕ್ಕೆ ಹೊಂದಿಕೊಂಡಿರುವ ತುಳು, ಕೊಂಕಣಿ, ಕೊಡವ ಮತ್ತಿತರ ಭಾಷೆಗಳ 20ಕ್ಕೂ ಹೆಚ್ಚು ಚಿತ್ರಗಳು ಸೇರಿದಂತೆ ಸುಮಾರು 190ಕ್ಕೂ ಹೆಚ್ಚು ಚಿತ್ರಗಳು ಕಳೆದ ಜನವರಿಯಿಂದ ಇಲ್ಲಿಯವರೆಗೆ ಕರ್ನಾಟಕದಲ್ಲಿ ತೆರೆಕಂಡಿವೆ.

ಈಗಾಗಲೇ ನವೆಂಬರ್‌ ಕೊನೆಯಿಂದ ಡಿಸೆಂಬರ್‌ ಕೊನೆಯವರೆಗೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳು ತೆರೆಗೆ ಬರುವುದಾಗಿ ಘೋಷಿಸಿಕೊಂಡಿವೆ. ಈ ಎಲ್ಲಾ ಚಿತ್ರಗಳು ಇದೇ ವರ್ಷಾಂತ್ಯಕ್ಕೆ ತೆರೆಗೆ ಬಂದರೆ ಈ ವರ್ಷ ಕೂಡ ತೆರೆಗೆ ಬಂದ ಚಿತ್ರಗಳ ಸಂಖ್ಯೆ ಸುಮಾರು 220ರ ಗಡಿ ದಾಟುವುದರಲ್ಲಿ ಅನುಮಾನವಿಲ್ಲ.

ಇನ್ನು ಇಲ್ಲಿಯವರೆಗೆ ಸುಮಾರು 70ಕ್ಕೂ ಹೆಚ್ಚು ಚಿತ್ರಗಳು ಸೆನ್ಸಾರ್‌ ಅನುಮತಿ ಪಡೆದುಕೊಂಡರೂ, ಸಮಯ ಹೊಂದಾಣಿಕೆಯಾಗದ ಕಾರಣ ಬಿಡುಗಡೆಗೆ ಮೀನಾಮೇಷ ಎಣಿಸುತ್ತಿವೆ. ಕೆಲವು ಚಿತ್ರಗಳು ತಮ್ಮ ಬಿಡುಗಡೆಯನ್ನು ಮುಂದಿನ ವರ್ಷದ ಆರಂಭಕ್ಕೆ ಮುಂದೂಡಿಕೊಂಡರೆ, ಇನ್ನು ಕೆಲವು ಚಿತ್ರಗಳು ಕೊನೆ ಕ್ಷಣದಲ್ಲಿ ಏನಾದರೂ ಬಿಡುಗಡೆಗೆ ಅವಕಾಶ ಸಿಗಬಹುದಾ ಎಂಬ ನಿರೀಕ್ಷೆಯಲ್ಲಿವೆ.

ಬಿಡುಗಡೆಯಲ್ಲಿ ಇಳಿಕೆಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕನ್ನಡ ಸಿನಿಮಾಗಳ ಬಿಡುಗಡೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಕಳೆದ ವರ್ಷ ಕೇವಲ ಕನ್ನಡದಿಂದಲೇ 230 ಪ್ಲಸ್‌ ಚಿತ್ರಗಳು ಬಿಡುಗಡೆಯಾಗಿದ್ದವು.

ಆದರೆ, ಈ ವರ್ಷದ ಇಲ್ಲಿವರೆಗಿನ ಲೆಕ್ಕಾಚಾರ ನೋಡಿದರೆ ಕನ್ನಡದಿಂದ 200 ಪ್ಲಸ್‌ ಚಿತ್ರಗಳಷ್ಟೇ ಬಿಡುಗಡೆಯಾಗಬಹುದು. ನವೆಂಬರ್‌ ಕೊನೆಯ ಎರಡು ವಾರಗಳಲ್ಲಿ ತಲಾ ಐದೈದು ಹಾಗೂ ಡಿಸೆಂಬರ್‌ ನಾಲ್ಕು ವಾರಗಳಲ್ಲಿ ಐದೈದು ಚಿತ್ರಗಳು ಬಿಡುಗಡೆಯಾದರೂ 200 ಪ್ಲಸ್‌ ಚಿತ್ರಗಳಷ್ಟೇ ಬಿಡುಗಡೆಯಾದಂತಾಗುತ್ತದೆ. ಇನ್ನು ಇತರ ಪ್ರಾದೇಶಿಕ ಭಾಷೆಗಳನ್ನು ಸೇರಿಸಿದರೆ 220 ಪ್ಲಸ್‌ ಚಿತ್ರಗಳು ಒಟ್ಟು ಬಿಡುಗಡೆಯಾದಂತಾಗುತ್ತದೆ.

*ವರ್ಷಾಂತ್ಯಕ್ಕೆ 200 ಪ್ಲಸ್‌ ಕನ್ನಡ ಚಿತ್ರಗಳ ಬಿಡುಗಡೆ ಸಾಧ್ಯತೆ
* ಪ್ರಾದೇಶಿಕ ಭಾಷಾ ಚಿತ್ರಗಳು ಸೇರಿ 220 ಪ್ಲಸ್‌ ನಿರೀಕ್ಷೆ
* ಕಳೆದ ವರ್ಷಕ್ಕೆ ಹೋಲಿಸಿದರೆ ಬಿಡುಗಡೆಯಲ್ಲಿ ಇಳಿಕೆ ಸಂಭವ?

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.