ಇಂದು ರಾಜೋತ್ಸವ!


Team Udayavani, Apr 24, 2018, 2:33 PM IST

rajkumar.jpg

ಏಪ್ರಿಲ್‌ 24 ಬಂತೆಂದರೆ, ಕನ್ನಡ ಚಿತ್ರರಸಿಕರಿಗೆ ಎಲ್ಲಿಲ್ಲದ ಉತ್ಸಾಹ. ಆ ಅತೀವ ಉತ್ಸಾಹಕ್ಕೆ ಕಾರಣ, ಡಾ.ರಾಜ್‌ಕುಮಾರ್‌ ಅವರ ಹುಟ್ಟುಹಬ್ಬ. ಏಪ್ರಿಲ್‌ 24 (ಇಂದು) ಡಾ.ರಾಜ್‌ಕುಮಾರ್‌ ಅವರ 90 ನೇ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ. ಚಿತ್ರರಂಗಕ್ಕಷ್ಟೇ ಅಲ್ಲ, ಕರುನಾಡ ಕನ್ನಡಿಗರಿಗೂ ಇದೊಂದು ಹಬ್ಬದ ಸಂಭ್ರಮ. ಪ್ರೀತಿಯ ಆರಾಧ್ಯ ದೈವ ಡಾ.ರಾಜ್‌ಕುಮಾರ್‌ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ರಾಜ್‌ ಅಭಿಮಾನಿಗಳು ಈಗಾಗಲೇ ಎಲ್ಲೆಡೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಸೇರಿದಂತೆ, ಅನೇಕ ಸಂಘ,ಸಂಸ್ಥೆಗಳು, ಡಾ.ರಾಜಕುಮಾರ್‌ ಅಭಿಮಾನಿಗಳ ಸಂಘ, ಕನ್ನಡ ಚಿತ್ರಕಲಾವಿದರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನೃತ್ಯ ಕಲಾವಿದರ ಸಂಘ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಸಂಘ, ಸಂಸ್ಥೆಗಳು ಡಾ.ರಾಜಕುಮಾರ್‌ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧವಾಗಿವೆ.

ಮಂಗಳವಾರ ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜಕುಮಾರ್‌ ಅವರ ಸ್ಮಾರಕಕ್ಕೆ ವಿಶೇಷ ಹೂವಿನ ಅಲಂಕಾರದೊಂದಿಗೆ ಪೂಜೆ ಸಲ್ಲಿಸಲಾಗುತ್ತದೆ. ಡಾ.ರಾಜ್‌ ಕುಟುಂಬ ಈ ಪೂಜೆ ಕಾರ್ಯದಲ್ಲಿ ಪಾಲ್ಗೊಳ್ಳಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ಡಾ.ರಾಜಕುಮಾರ್‌ ಜನ್ಮದಿನೋತ್ಸವ ನಡೆಯಲಿದೆ. ಮಂಡಳಿ ಮುಂದೆ ಇರುವ ಡಾ.ರಾಜಕುಮಾರ್‌ ಪುತ್ಥಳಿಗೆ ಹೂವಿನ ಮಾಲೆ ಹಾಕುವ ಮೂಲಕ ರಾಜ್‌ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಜ್ಯ ಸರ್ಕಾರ ಡಾ.ರಾಜಕುಮಾರ್‌ ಅವರ ಜನ್ಮ ದಿನಾಚರಣೆ ಆಚರಿಸುತ್ತಿದೆ. ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ವಾರ್ತಾ ಇಲಾಖೆ ಹಾಗು ಕರ್ನಾಟಕ ಚಲನಚಿತ್ರ ಆಕಾಡೆಮಿ ಸಹಯೋಗದಲ್ಲಿ ನಡೆಯಲಿರುವ ರಾಜ್‌ ಜನ್ಮದಿನಾಚರಣೆಯಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್‌, ಶಿವರಾಜಕುಮಾರ್‌,

ರಾಘವೇಂದ್ರ ರಾಜಕುಮಾರ್‌, ಪುನೀತ್‌ರಾಜಕುಮಾರ್‌ ಸೇರಿದಂತೆ ರಾಜ್‌ಕುಟುಂಬ ವರ್ಗ ಹಾಗು ಚಿತ್ರೋದ್ಯಮದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ಡಾ..ರಾಜಕುಮಾರ್‌ ಚಿತ್ರಗಳ ಗೀತಗಾಯನ ನಡೆಯಲಿದ್ದು, ಗಾಯಕಿ ಮಂಜುಳ ಗುರುರಾಜ್‌, ಸುನೀತ, ಮೋಹನ್‌ ಅವರು ಗೀತಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.