Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್!
Team Udayavani, Sep 7, 2024, 9:30 PM IST
“ಟಾಮಿ’ ಈ ಹೆಸರು ಶ್ವಾನ ಪ್ರಿಯರಿಗೆ ಹೆಚ್ಚು ಆಪ್ತ. ಈಗ ಇದನ್ನೇ ಸಿನಿಮಾದ ಟೈಟಲ್‌ನ್ನಾಗಿಸಿದೆ ಹೊಸ ತಂಡ. ಈ ಚಿತ್ರಕ್ಕೆ ಆಶು ನಿರ್ದೇಶನವಿದೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸುತ್ತಿದ್ದಾರೆ.
ನಿರ್ದೇಶಕ ನಾಯಕ,ಆಶು ಅವರಿಗೆ ಚಿತ್ರರಂಗವೇನು ಹೊಸದೇನಲ್ಲ. ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು.
“ಮುಕುಂದ ಮುರಾರಿ’, “ಅಂಬಿ ನಿಂಗೆ ವಯಸ್ಸಾಯ್ತೋ’, “ಕೋಟಿಗೊಬ್ಬ-3′ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು.
ಹಬ್ಬದ ಪ್ರಯುಕ್ತ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ನಾಯಕ ಆಶು, ಜೊತೆಯಲ್ಲಿ ನಾಯಿ ಹಾಗೂ ಆರ್ ಎಕ್ಸ್ ಬೈಕ್ ಕಾಣುತ್ತಿದೆ.
ಟಾಮಿ ಸಿನಿಮಾದಲ್ಲಿ ಬಹುತೇಕ ಹೊಸಬರು ಸೇರಿಕೊಂಡಿದ್ದಾರೆ. ಎಲಿಪಾಸ್ ಇಂಡಿಯಾ ಎಂಟರ್ಟೆçನ್ಮೆಂಟ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.