ನಾಳೆ “ಗೀತ ಗೋವಿಂದಂ’ ಆಡಿಯೋ ರಿಲೀಸ್
Team Udayavani, Jul 28, 2018, 12:57 PM IST
ಪರಶುರಾಮ್ ನಿರ್ದೇಶನದ “ಗೀತ ಗೋವಿಂದಂ’ ಚಿತ್ರದ ಫಸ್ಟ್ಲುಕ್, ಮೊದಲ ಹಾಡು, ಮತ್ತು ಟೀಸರ್ ಇತ್ತೀಚೆಗಷ್ಟೆ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸದ್ದು ಮಾಡಿತ್ತು. ಅಲ್ಲದೇ “ಇಂಕೇಮ್ ಇಂಕೇಮ್ ಕಾವಾಲೇ’ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದ್ದು, ಇದೀಗ ಚಿತ್ರತಂಡ ಚಿತ್ರದ ಆಡಿಯೋ ರಿಲೀಸ್ಗೆ ಡೇಟ್ ಫಿಕ್ಸ್ ಮಾಡಿದೆ.
ಇದೇ ತಿಂಗಳ 29 ರಂದು ಭಾನುವಾರ ಹೈದರಾಬಾದ್ನಲ್ಲಿ “ಗೀತ ಗೋವಿಂದಂ’ ಸಿನಿಮಾ ಆಡಿಯೋ ಬಿಡುಗಡೆ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸ್ಟೈಲಿಶ್ ಸಾರ್ ಅಲ್ಲು ಅರ್ಜುನ್ ಆಡಿಯೋ ಬಿಡುಗಡೆ ಮಾಡಲಿದ್ದಾರೆ. ಹಾಗೂ ಟಾಲಿವುಡ್ನ ಇತರ ಕಲಾವಿದರು ಮತ್ತು ಗಣ್ಯರು ಕೂಡಾ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಇನ್ನು “ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಮತ್ತು ಕನ್ನಡದ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರವನ್ನು ಗೀತಾ ಆರ್ಟ್ಸ್ 2 ಬ್ಯಾನರ್ ಅಡಿ ಬನ್ನಿ ವಾಸ್ ನಿರ್ಮಿಸಿದ್ದು, ಗೋಪಿ ಸುಂದರ್ ಸಂಗೀತ ಚಿತ್ರಕ್ಕಿದೆ. ಸಿನಿಮಾ ಆಗಸ್ಟ್ 15 ರಂದು ತೆರೆಗೆ ಬರಲು ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು