ನಾಳೆ ಅಪ್ಪು ಡ್ರೀಮ್ ಪ್ರೊಜೆಕ್ಟ್ ‘ಗಂಧದ ಗುಡಿ’ಯ ಟ್ರೇಲರ್ ಬಿಡುಗಡೆ
Team Udayavani, Oct 8, 2022, 11:17 AM IST
ಪವರ್ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಿಸಿ, ತೆರೆಮೇಲೆ ಕಾಣಿಸಿಕೊಂಡಿರುವ “ಗಂಧದ ಗುಡಿ’ ಡಾಕ್ಯುಮೆಂಟರಿ, ಇದೇ ಅಕ್ಟೋಬರ್ 28ಕ್ಕೆ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ “ಗಂಧದ ಗುಡಿ’ಯ ಟ್ರೇಲರ್ ಬಿಡುಗಡೆ ಮಾಡಲು “ಪಿಆರ್ ಕೆ ಪ್ರೊಡಕ್ಷನ್ಸ್’ ಯೋಜನೆ ಹಾಕಿಕೊಂಡಿದೆ.
ಅಕ್ಟೋಬರ್ 9ರಂದು ಬೆಳಿಗ್ಗೆ 10.19ಕ್ಕೆ “ಪಿಆರ್ಕೆ ಯು-ಟ್ಯೂಬ್’ ಚಾನೆಲ್ನಲ್ಲಿ “ಗಂಧದ ಗುಡಿ’ಯ ಟ್ರೇಲರ್ ಬಿಡುಗಡೆಯಾಗಲಿದೆ.
ಅಂದಹಾಗೆ, “ಗಂಧದ ಗುಡಿ’ ಕಮರ್ಷಿಯಲ್ ಸಿನಿಮಾವಲ್ಲ. ಕರ್ನಾಟಕದ ಭೌಗೋಳಿಕ ವೈವಿಧ್ಯತೆ, ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳನ್ನು ಡಾಕ್ಯುಮೆಂಟರಿ ರೂಪದಲ್ಲಿ ತೆರೆಮೇಲೆ ತರಲಾಗಿದೆ. ಪುನೀತ್ ರಾಜಕುಮಾರ್ ಕೂಡ ಈ ಡಾಕ್ಯುಮೆಂಟರಿಯಲ್ಲಿ ತೆರೆಮೇಲೆ ಕಾಣಿಸಿಕೊಂಡಿದ್ದು, ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯಸ್ಮರಣೆಯ ಸಂದರ್ಭದಲ್ಲಿ “ಗಂಧದ ಗುಡಿ’ಯನ್ನು ಸಿನಿಮಾದಂತೆಯೇ ಥಿಯೇಟರ್ನಲ್ಲಿ ಬಿಡುಗಡೆ ಮಾಡಲು “ಪಿಆರ್ಕೆ ಪ್ರೊಡಕ್ಷನ್ಸ್’ ಪ್ಲಾನ್ ಹಾಕಿಕೊಂಡಿದೆ.
ಈಗಾಗಲೇ “ಗಂಧದ ಗುಡಿ’ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಮತ್ತು ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಹಾಗೂ ಕುತೂಹಲವನ್ನು ಹುಟ್ಟುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…