ದೀಪಾವಳಿ ಹಬ್ಬಕ್ಕೆ ಹಾಡಲ್ಲಿ ಎಂಟ್ರಿ ಕೊಟ್ಟ ತ್ರಿವಿಕ್ರಮ
ಕ್ರೇಜಿಸ್ಟಾರ್ ಪುತ್ರನ ಚೊಚ್ಚಲ ಚಿತ್ರದ ಹಾಡು ಹೊರಕ್ಕೆ
Team Udayavani, Nov 18, 2020, 1:14 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ತ್ರಿವಿಕ್ರಮ’ದ ಚಿತ್ರೀಕರಣ ಬಹುತೇಕ ಕೊನೆಯ ಹಂತಕ್ಕೆ ತಲುಪಿದೆ.
ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆದಷ್ಟು ಬೇಗ ಹಾಡುಗಳಚಿತ್ರೀಕರಣ ಮುಗಿಸುವ ಯೋಚನೆಯಲ್ಲಿದೆ ಚಿತ್ರತಂಡ. ಇದರ ನಡುವೆಯೇ ದೀಪಾವಳಿ ಹಬ್ಬದ ಸಂದರ್ಭದಲ್ಲಿ “ತ್ರಿವಿಕ್ರಮ’ ಚಿತ್ರದ “ಮಮ್ಮಿ ಪ್ಲೀಸ್ ಮಮ್ಮಿ…’ ಎಂಬ ಹಾಡೊಂದನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದೆ.
ಮಗ ತನ್ನ ಪ್ರೀತಿಯ ಬಗ್ಗೆ ತಾಯಿಯ ಬಳಿ ವಿನೂತನ ಶೈಲಿಯಲ್ಲಿ ಹೇಳಿಕೊಳ್ಳುವ ಈ ಹಾಡಿಗೆ ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ವಿಜಯ್ ಪ್ರಕಾಶ್ ಈ ಹಾಡಿಗೆ ಧ್ವನಿಯಾಗಿದ್ದಾರೆ. ಚಿತ್ರದ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
“ಗೌರಿ ಎಂಟರ್‌ಟೈನರ್’ ಬ್ಯಾನರ್‌ನಲ್ಲಿ ಸೋಮಣ್ಣ ನಿರ್ಮಿಸುತ್ತಿರುವ “ತ್ರಿವಿಕ್ರಮ’ ಚಿತ್ರಕ್ಕೆ ಸಹನಾ ಮೂರ್ತಿ ಕಥೆ, ಚಿತ್ರಕಥೆ,ಸಂಭಾಷಣೆ ಬರೆದು ನಿದೇಶಿಸುತ್ತಿದ್ದಾರೆ. ಚಿತ್ರಕ್ಕೆ ಸಂತೋಷ್ ರೈ ಪಾತಾಜೆ, ಗುರು ಪ್ರಶಾಂತ್ ರೈ ಛಾಯಾಗ್ರಹಣ ಹಾಗೂ ಕೆ.ಎಂ ಪ್ರಕಾಶ್ ಸಂಕಲನವಿದೆ. “ತ್ರಿವಿಕ್ರಮ’ ಚಿತ್ರದಲ್ಲಿ ವಿಕ್ರಮ್ ರವಿಚಂದ್ರನ್‌ಗೆ ನಾಯಕಿಯಾಗಿ ಅಕಾಂಕ್ಷ ಶರ್ಮ ಜೋಡಿಯಾಗಿದ್ದಾರೆ. ಉಳಿದಂತೆ ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧು ಕೋಕಿಲ, ಚಿಕ್ಕಣ್ಣ, ರೋಹಿತ್ ರಾಯ್, ಆದಿ ಲೋಕೇಶ್, ಶಿವಮಣಿ, ಅಕ್ಷರ ಗೌಡ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ತ್ರಿವಿಕ್ರಮ’ನ ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ತೆರೆಮೇಲೆ “ತ್ರಿವಿಕ್ರಮ’ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತಾನೆ ಅನ್ನೋದು, ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಜೂ. 1: ಮೂಡುಬಿದಿರೆಗೆ ಮುಖ್ಯಮಂತ್ರಿ ಬೊಮ್ಮಾಯಿ; ವಿದ್ಯಾರ್ಥಿಗಳ ಜತೆಗೆ ಸಂವಾದ