ಅವಸ್ಥಾಂತರ ಚಿತ್ರಕ್ಕೆ ಇಬ್ಬರು ನಾಯಕಿಯರು
Team Udayavani, Nov 20, 2020, 7:10 PM IST
ನಟ ಸಂಚಾರಿ ವಿಜಯ್ ಅಭಿನಯದ ಹೊಸಚಿತ್ರಕ್ಕೆ “ಅವಸ್ಥಾಂತರ’ ಎಂದು ಹೆಸರಿಡಲಾಗಿದ್ದು, ಜಿ. ದೀಪಕ್ಕುಮಾರ್ ಈ ಚಿತ್ರಕ್ಕೆಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಹದಿಹರೆಯದ ಯುವಕನೊಬ್ಬ ತನಗೆ ಅರಿವಿಲ್ಲದೆ ಬಯಕೆಗಳು, ಕಾಮನೆಗಳು ಹುಟ್ಟಿಕೊಂಡು, ಹೇಗೆ ಆತನನ್ನು ಅತಂತ್ರ ಸ್ಥಿತಿಗೆ ತೆಗೆದುಕೊಂಡು ಹೋಗುತ್ತದೆ. ಹಾಗೆಯೇ ಅದರಿಂದ ಏನೆಲ್ಲಾ ಕಷ್ಟಗಳು, ಅವಸ್ಥೆ, ಅನಾಹುತಗಳು ನಡೆಯುತ್ತವೆ ಎಂಬುದನ್ನು ತಿಳಿ ಹಾಸ್ಯದ ಮೂಲಕ ಈ ಚಿತ್ರದಲ್ಲಿ ತೆರೆಮೇಲೆ ತರಲಾಗುತ್ತಿದೆ.
ಕಿರುತೆರೆ ಧಾರವಾಹಿಗಳ ಖ್ಯಾತಿಯ ರಂಜನಿ ರಾಘವನ್, ದಿಶಾಕೃಷ್ಣಯ್ಯ ನಾಯಕಿಯರಾಗಿ ಚಿತ್ರದಲ್ಲಿಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್ ಆಗಿದ್ದು, ಜನವರಿ ಮೊದಲ ವಾರದಲ್ಲಿ ಚಿತ್ರದ ಮಹೂರ್ತ ನೆರವೇರಲಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.