ವಸಿಷ್ಠ ಹೊಸ ಚಿತ್ರ “ಮಂಜರನ್‌’

Team Udayavani, Jul 15, 2019, 3:01 AM IST

ಮೊನ್ನೆಯಷ್ಟೇ ವಸಿಷ್ಠ ಸಿಂಹ ನಾಯಕರಾಗಿರುವ, ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ ಹೊಸ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಚಿತ್ರಕ್ಕೆ “ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಎಂದು ಹೆಸರಿಡಲಾಗಿದೆ. ಈ ನಡುವೆಯೇ ವಸಿಷ್ಠ ಸಿಂಹ ನಾಯಕರಾಗಿ ನಟಿಸಲಿರುವ ಹೊಸ ಸಿನಿಮಾದ ಟೈಟಲ್‌ ರಿವೀಲ್‌ ಆಗಿದೆ.

ಅದು “ಮಂಜರನ್‌’. ವಸಿಷ್ಠ “ಮಂಜರನ್‌’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ “ಮಡಮಕ್ಕಿ’ ಸಿನಿಮಾ ನಿರ್ದೇಶಿಸಿದ್ದ ವಿನಯ್‌ ಪ್ರೀತಮ್‌ ನಿರ್ದೇಶಿಸುತ್ತಿದ್ದಾರೆ. ಅಂದಹಾಗೆ, ಇದು ಅಂಡರ್‌ವರ್ಲ್ಡ್ ಕುರಿತಾದ ಸಿನಿಮಾವಾಗಿದ್ದು, ಮಂಗಳೂರು ಹಿನ್ನೆಲೆಯಲ್ಲಿ ಸಾಗಲಿದೆ.

90ರ ದಶಕದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ವಸಿಷ್ಠ ಜೊತೆ ಇನ್ನೊಬ್ಬ ನಾಯಕ ಕೂಡಾ ಇರಲಿದ್ದು, ಅದು ಇನ್ನಷ್ಟೇ ಅಂತಿಮವಾಗಬೇಕಿದೆ. ಚಿತ್ರಕ್ಕೆ ನವೀನ್‌ ಕುಮಾರ್‌ ಅವರ ಛಾಯಾಗ್ರಹಣವಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ