ಬೀಚ್‌ ನಲ್ಲಿ ವಸಿಷ್ಠ ‘ಲವ್‌ ಲಿ’ ಟೈಮ್‌


Team Udayavani, Dec 19, 2022, 5:29 PM IST

ಬೀಚ್‌ ನಲ್ಲಿ ವಸಿಷ್ಠ ‘ಲವ್‌ ಲಿ’ ಟೈಮ್‌

ವಸಿಷ್ಠ ಸಿಂಹ ನಟನೆಯ “ಲವ್‌ ಲಿ’ ಸಿನಿಮಾ ಬೆಂಗಳೂರಿನಲ್ಲಿ ಹಾಗೂ ಎರಡನೇ ಶೆಡ್ನೂಲ್‌ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ.

“ಲವ್‌ ಲಿ’ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ ಹತ್ತು ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್‌ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ನಟ ವಸಿಷ್ಠ ಸಿಂಹ ಮಾತನಾಡಿ, ಇದೊಂದು ಕಮರ್ಷಿಯಲ್‌ ರೋಮ್ಯಾಂಟಿಕ್‌ ಲವ್‌ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದ್ದೇವೆ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೇ ವ್ಯಕ್ತಪಡಿಸುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ ಎನ್ನುವುದು ವಸಿಷ್ಠ ಮಾತು.

ನಿರ್ದೇಶಕ ಚೇತನ್‌ ಕೇಶವ್‌ ಮಾತನಾಡಿ, ಏಳು ದಿನಗಳ ಚಿತ್ರೀಕರಣ ನಡೆಸಿದರೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದೆ. ಲಂಡನ್‌ನಲ್ಲೂ ಚಿತ್ರೀಕರಣ ಮಾಡಬೇಕಿದೆ. ಜನವರಿ ಮೊದಲ ವಾರದಲ್ಲಿ ಚಿತ್ರತಂಡ ಲಂಡನ್‌ಗೆ ತೆರಳಲಿದೆ ಎಂದರು. ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಖಂಡ ಮೂಲದ ಸ್ಟೆಫಿ ಪಟೇಲ್‌ ನಟಿಸುತ್ತಿದ್ದಾರೆ.

ಉಳಿದಂತೆ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಮಾಸ್ಟರ್‌ ಆನಂದ್‌ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭರಾಜ್‌ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್‌ ಲಿ ಚಿತ್ರವನ್ನು ರವೀಂದ್ರ ಕುಮಾರ್‌ ನಿರ್ಮಾಣ ಮಾಡುತ್ತಿದ್ದಾರೆ

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.