ಹೊಸ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗೆ ವೇದಿಕಾ ನಾಯಕಿ
Team Udayavani, Feb 22, 2022, 12:17 PM IST
ಪ್ರಜ್ವಲ್ ದೇವರಾಜ್ ನಟನೆಯ “ಗಣ’ ಚಿತ್ರ ಆರಂಭವಾಗಿರೋದು ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ನಾಯಕಿಯ ಎಂಟ್ರಿಯಾಗಿದೆ. ಅದು ವೇದಿಕಾ. ಯಾವ ವೇದಿಕಾ ಎಂದು ನೀವು ಕೇಳಬಹುದು. ಅಂದಹಾಗೆ, ವೇದಿಕಾ ಕನ್ನಡಕ್ಕೆ ಹೊಸ ಹುಡುಗಿಯಲ್ಲ. ಈಗಾಗಲೇ “ಸಂಗಮ’, “ಶಿವಲಿಂಗ’ ಸೇರಿದಂತೆ ಕನ್ನಡದ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈಗ “ಗಣ’ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
ಆರಂಭದಲ್ಲಿ ಈ ಚಿತ್ರಕ್ಕೆ ಸಾರಾ ನಾಯಕಿ ಎಂದು ಹೇಳಲಾಗಿತ್ತು. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾದ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ. “ಚರಿ ಕ್ರಿಯೇಷನ್ಸ್’ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ:ಥಿಯೇಟರ್ ಮುಂದೆ ಫ್ಯಾನ್ಸ್ ಕಟೌಟ್! ಫೆ. 25ಕ್ಕೆ ‘ಓಲ್ಡ್ ಮಾಂಕ್’ ಚಿತ್ರ ತೆರೆಗೆ
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ