ಹೊಸ ಚಿತ್ರಕ್ಕೆ ಮಹೇಶ್ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ
Team Udayavani, Apr 24, 2024, 4:45 PM IST
ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಪ್ರತಿ ಸಿನಿಮಾದಲ್ಲೂ ಹೊಸ ಮುಖಗಳನ್ನು ಪರಿಚಯಿಸುತ್ತಲೇ ಬಂದಿರುವ ಮಹೇಶ್ ಬಾಬು ಈ ಬಾರಿಯೂ ಹೊಸ ಪ್ರತಿಭೆಗಳೊಂದಿಗೆ ಸಿನಿಮಾ ಮಾಡುತ್ತಿದ್ದಾರೆ.
ಹೊಸ ಚಿತ್ರದಲ್ಲಿ ಸ್ಮೈಲ್ ಗುರು ರಕ್ಷಿತ್ ನಾಯಕರಾಗಿ ನಟಿಸುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ.
ಈ ಚಿತ್ರದ ಮೂಲಕ ಮತ್ತೂಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಮೆರವಣಿಗೆ’ ಸಿನಿಮಾ ಮೂಲಕ ಐಂದ್ರಿತಾ ರೇ, “ಚಿರು’ ಸಿನಿಮಾ ಮೂಲಕ ಕೃತಿ ಕರಬಂದ, “ಅಜಿತ್’ ಚಿತ್ರದ ಮೂಲಕ ನಿಕ್ಕಿ ಗಲ್ರಾನಿ, “ಕ್ರೇಜಿ ಬಾಯ್’ ಮೂಲಕ ಆಶಿಕಾ ರಂಗನಾಥ್ ಮತ್ತು “ಅಪರೂಪ’ ಮೂಲಕ ಹೃತಿಕಾ ಶ್ರೀನಿವಾಸ್ ಹೀಗೆ ಹಲವಾರು ನಟಿಯರನ್ನು ಕನ್ನಡ
ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.
ಜೆರುಶಾಗೆ ಸಿನಿಮಾ ರಂಗ, ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ “ವೀರ ಮದಕರಿ’ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿಕೊಡುತ್ತಿದ್ದಾರೆ. ಇದರ ಜೊತೆಗೆ ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೂಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು