ಬಿಡುಗಡೆಯ ಹಂತಕ್ಕೆ ಬಂತು ಪ್ರಜ್ವಲ್-ರಚಿತಾ ಅಭಿನಯದ ‘ವೀರಂ’
Team Udayavani, Feb 12, 2023, 2:54 PM IST
ನಟ ಪ್ರಜ್ವಲ್ ದೇವರಾಜ್ ಅಭಿನಯದ “ವೀರಂ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರವನ್ನು ಏಪ್ರಿಲ್ನಲ್ಲಿ ತೆರೆಗೆ ತರಲು ನಿರ್ಮಾಪಕ ಶಶಿಧರ್ ಕೆ.ಎಂ ನಿರ್ಧರಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಿಟ್ಲಿಸ್ಟ್ ಸೇರಿದೆ.
ಇನ್ನು “ವೀರಂ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ಗೆ ಮೊದಲ ಬಾರಿಗೆ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶ್ರೀನಗರ ಕಿಟ್ಟಿ ಚಿತ್ರದಲ್ಲಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮಾರು ಏಳು ವರ್ಷಗಳ ಬಳಿಕ ನಟ ಶಿಷ್ಯ ದೀಪಕ್ ಚಿತ್ರದಲ್ಲಿ ನೆಗೆಟಿವ್ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಹಿರಿಯ ನಟಿ ಶ್ರುತಿ, ಅಚ್ಯುತಕುಮಾರ್, ಗಿರಿ ಮೊದಲಾದವರು “ವೀರಂ’ನ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ವೀರಂ’ ಚಿತ್ರದ ಹಾಡುಗಳಿಗೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆಯಿದ್ದು, ಲವಿತ್ ಛಾಯಾಗ್ರಹಣ, ರವಿಚಂದ್ರನ್ ಸಂಕಲನವಿದೆ.
“ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ “ವೀರಂ’ ಚಿತ್ರಕ್ಕೆ ಶಶಿಧರ್ ಕೆ.ಎಂ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಕುಮಾರ್ ರಾಜ್ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
ಇದನ್ನೂ ಓದಿ:ಸೋಲುತ್ತೇವೆ ಎಂಬುದನ್ನು ಕಾಂಗ್ರೆಸ್-ಸಿಪಿಐಎಂ ಮೈತ್ರಿ ಸಾಬೀತುಪಡಿಸಿದೆ :ತ್ರಿಪುರಾದಲ್ಲಿ ಶಾ
“ವೀರಂ’ ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಶಶಿಧರ್ ಕೆ.ಎಂ, “ಪ್ರಜ್ವಲ್ ದೇವರಾಜ್ ಸಿನಿ ಕೆರಿಯರ್ನಲ್ಲಿ “ವೀರಂ’ ಹೊಸಥರದ ಸಿನಿಮಾ. ಚಿತ್ರವನ್ನು ಏಪ್ರಿಲ್ನಲ್ಲಿ ತೆರೆಗೆ ತರುವ ಯೋಚನೆಯಲ್ಲಿದ್ದೇವೆ. ಇದರಲ್ಲಿ ಪ್ರಜ್ವಲ್ ದೇವರಾಜ್ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಿಗ್ ಸ್ಟಾರ್ ಕಾಸ್ಟಿಂಗ್, ಬಿಗ್ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಲವ್, ಸೆಂಟಿಮೆಂಟ್, ಆ್ಯಕ್ಷನ್, ಕಾಮಿಡಿ ಹೀಗೆ ಕಂಪ್ಲೀಟ್ ಎಂಟರ್ಟೈನ್ಮೆಂಟ್ ಎಲಿಮೆಂಟ್ಸ್ “ವೀರಂ’ನಲ್ಲಿದೆ. ಮಾಸ್ ಮತ್ತು ಕ್ಲಾಸ್ ಆಡಿಯನ್ಸ್ಗೆ “ವೀರಂ’ ಸಿನಿಮಾ ಖಂಡಿತಾ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು