ರಭಸ; ಹೊಸ ಚಿತ್ರಕ್ಕೆ ವೀರೆನ್ ಕೇಶವ್ ತಯಾರಿ


Team Udayavani, Mar 23, 2023, 4:11 PM IST

ರಭಸ; ಹೊಸ ಚಿತ್ರಕ್ಕೆ ವೀರೆನ್ ಕೇಶವ್ ತಯಾರಿ

ಈ ವರ್ಷದ ಜನವರಿ ತಿಂಗಳಿನಲ್ಲಿ ತೆರೆಕಂಡ ಔಟ್‌ ಆ್ಯಂಡ್‌ ಔಟ್‌ ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರದ “ಕಾಕ್ಟೆಲ್’ ಸಿನಿಮಾ ನಿಮಗೆ ಗೊತ್ತಿರಬಹುದು. ಈ “ಕಾಕ್ಟೆಲ್‌’ ಸಿನಿಮಾದ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದವರು ವಿರೇನ್‌ ಕೇಶವ್‌. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ವಿರೇನ್‌ ಕೇಶವ್‌, ಈಗ ಸದ್ದಿಲ್ಲದೆ ಮಾಸ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಹೌದು, ಯುಗಾದಿ ಹಬ್ಬದ ಸಂದರ್ಭದಲ್ಲಿ ವಿರೇನ್‌ ಕೇಶವ್‌ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾ ಘೋಷಣೆಯಾಗಿದೆ. ಅಂದಹಾಗೆ, ವಿರೇನ್‌ ಕೇಶವ್‌ ಎರಡನೇ ಸಿನಿಮಾಕ್ಕೆ “ರಭಸ’ ಎಂದು ಟೈಟಲ್‌ ಇಡಲಾಗಿದ್ದು, ಯುಗಾದಿ ಹಬ್ಬದಂದು “ರಭಸ’ ಟೈಟಲ್‌ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

“ವಿಜಯಲಕ್ಷ್ಮೀ ಕಂಬೈನ್ಸ್‌’ ಬ್ಯಾನರ್‌ನಲ್ಲಿ ಡಾ. ಶಿವಪ್ಪ, ಶ್ರೀನಿವಾಸ್‌ ಕೆ. ಬಿ, ಫಿರೋಜ್‌ ನದಾಫ್ ಮತ್ತು ಮೆಹಬೂಬ ಸಾಬ್‌ ಹವಾಲ್ದಾರ್‌ (ಮುಂಡರಗಿ) ಜಂಟಿಯಾಗಿ ನಿರ್ಮಿಸುತ್ತಿರುವ “ರಭಸ’ ಸಿನಿಮಾಕ್ಕೆ ಯುವ ನಿರ್ದೇಶಕ ರಾಜ್‌ ಚೈತನ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನು “ರಭಸ’ ಸಿನಿಮಾದ ಹೆಸರೇ ಹೇಳುವಂತೆ, ಇದೊಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಸಬ್ಜೆಕ್ಟ್ ಸಿನಿಮಾ. ಆ್ಯಕ್ಷನ್‌ ಜೊತೆಗೆ ಒಂದು ನವಿರಾದ ಪ್ರೇಮಕಥೆ, ಸೆಂಟಿಮೆಂಟ್‌, ಎಮೋಶನ್ಸ್‌, ಕಾಮಿಡಿ ಎಲ್ಲವೂ ಸೇರಿಸಿ ಪಕ್ಕಾ ಮಾಸ್‌ ಶೈಲಿಯಲ್ಲಿ “ರಭಸ’ ಸಿನಿಮಾವನ್ನು ತೆರೆಗೆ ತರಲು ಹೊರಟಿದೆ ಚಿತ್ರತಂಡ. ಇದೇ ಏಪ್ರಿಲ್‌ ಅಂತ್ಯಕ್ಕೆ “ರಭಸ’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಕೊಡಗು ಸುತ್ತಮುತ್ತ ಸಿನಿಮಾದ ಮಾತಿನ ಭಾಗದ ಚಿತ್ರೀಕರಣ ನಡೆಯಲಿದೆ. ಗೋವಾ, ನೇಪಾಳ ಮತ್ತು ಬ್ಯಾಂಕಾಕ್‌ ನಲ್ಲಿ ಸಿನಿಮಾದ ಹಾಡುಗಳನ್ನು ಚಿತ್ರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಈಗಾಗಲೇ “ರಭಸ’ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ದಕ್ಷಿಣ ಭಾರತದ ಹಲವು ಜನಪ್ರಿಯ ಕಲಾವಿದರು “ರಭಸ’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ರಭಸ’ ಬಿಗ್‌ ಬಜೆಟ್‌ ಮತ್ತು ಬಿಗ್‌ ಕಾಸ್ಟಿಂಗ್‌ನಲ್ಲಿ ತಯಾರಾಗುತ್ತಿದ್ದು, ಇದೇ ತಿಂಗಳಾಂತ್ಯಕ್ಕೆ ಸಿನಿಮಾದ ನಾಯಕಿ, ಇತರೆ ಕಲಾವಿದರು ಮತ್ತು ತಂತ್ರಜ್ಞರ ಅಂತಿಮ ಹೆಸರು ಹೊರಬೀಳಲಿದೆ.

ಸದ್ಯ ಬಿಡುಗಡೆಯಾಗಿರುವ “ರಭಸ’ ಸಿನಿಮಾದ ಫ‌ಸ್ಟ್‌ ಲುಕ್‌ ಟೈಟಲ್‌ ಪೋಸ್ಟರ್‌ನಲ್ಲಿ ನಾಯಕ ವಿರೇನ್‌ ಕೇಶವ್‌ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ “ರಭಸ’ ಸಿನಿಮಾದ ಪಾತ್ರಕ್ಕಾಗಿ ತೆರೆಮರೆಯಲ್ಲಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿರುವ ವಿರೇನ್‌ ಕೇಶವ್‌, ಸಿನಿಮಾದ ಆ್ಯಕ್ಷನ್‌ ದೃಶ್ಯಗಳಿಗಾಗಿ ವಿಶೇಷ ತರಬೇತಿ ಪಡೆದುಕೊಂಡಿದ್ದಾರೆ

ಟಾಪ್ ನ್ಯೂಸ್

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

darbar

ಜೂ.09ಕ್ಕೆ ವಿ.ಮನೋಹರ್‌ ನಿರ್ದೇಶನದ ‘ದರ್ಬಾರ್‌’ ತೆರೆಗೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ