ಹೊಸಬರಿಂದ ವಿಚಾರಣೆ ಆರಂಭ
Team Udayavani, Dec 6, 2022, 4:52 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ವಿಚಾರಣೆ’ ಸಿನಿಮಾದ ಮುಹೂರ್ತ ಇತ್ತೀಚೆಗೆ ನೆರವೇರಿತು.
ಸುಮಾರು 160ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನೃತ್ಯ ಸಂಯೋಜಕರಾಗಿ ಕೆಲಸ ಮಾಡಿದ ಅನುಭವವಿರುವ ಎನ್. ಅಕುಲ್, “ವಿಚಾರಣೆ’ ಸಿನಿಮಾದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. “ಯಶ ಫಿಲಂಸ್ ಬ್ಯಾನರ್’ ಅಡಿಯಲ್ಲಿ ಆರ್. ಭಾಗ್ಯ “ವಿಚಾರಣೆ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
“ವಿಚಾರಣೆ’ ಸಿನಿಮಾದ ಬಗ್ಗೆ ಮಾತನಾಡುವ ನಿರ್ದೇಶಕ ಅಕುಲ್, “ಕೇಸ್ ಒಂದರಲ್ಲಿ ಅಮಾಯಕ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದು, ಆತ ಮತ್ತು ಆತನ ಕುಟುಂಬ ಚಿತ್ರಹಿಂಸೆ ಅನುಭವಿಸುತ್ತದೆ. ಹಾಗಾದರೆ ಆತ ಮಾಡಿದ ತಪ್ಪಾದರೂ ಏನು? ಎಂಬುದೇ ಸಿನಿಮಾದ ಸಸ್ಪೆನ್ಸ್. ಕೊನೆಗೆ ಆ ಹುಡುಗ ಪೊಲೀಸರ ಕೈಯಿಂದ ಹೊರ ಬರುತ್ತಾನಾ, ಇಲ್ಲವಾ ಎಂಬುದು ಚಿತ್ರದ ಒನ್ ಲೈನ್ ಸ್ಟೋರಿ. “ವಿಚಾರಣೆ’ ಸಿನಿಮಾದಲ್ಲಿ ಪ್ರೀತಿ, ದೌರ್ಜನ್ಯ, ಎಮೋಶನ್, ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಹಾಡು ಹೀಗೆ ಎಲ್ಲ ಥರದ ಮನರಂಜನಾತ್ಮಕ ಅಂಶಗಳೂ ಇದೆ’ ಎಂದು ವಿವರಣೆ ಕೊಡುತ್ತಾರೆ.
“ವಿಚಾರಣೆ’ ಸಿನಿಮಾದಲ್ಲಿ ಮಡೆನೂರು ಮನು ನಾಯಕನಾಗಿ, ಜಾನು ನಾಯಕಿಯಾಗಿ ಅಭಿನಯಿಸುತ್ತಿದ್ದು, ಉಳಿದಂತೆ ನಾಗೇಂದ್ರ ಅರಸ್, ಪ್ರಮೋದ್ ಶೆಟ್ಟಿ, ಆದಿ ಕೇಶವ್, ಮಹೇಶ್ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಜಿ. ವಿ ರಮೇಶ್ ಛಾಯಾಗ್ರಹಣ, ಸತೀಶ್ ಬಾಬು ಸಂಗೀತ ಸಂಯೋಜನೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!