ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರದಲ್ಲಿ ವಿಹಾನ್-ಅಂಕಿತ ಜೋಡಿ
Team Udayavani, Jul 17, 2022, 3:12 PM IST
777 ಚಾರ್ಲಿ ಚಿತ್ರದ ಯಶಸ್ಸಿನ ಸಂತಸದಲ್ಲಿರುವ ನಟ- ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಮತ್ತೊಂದು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಹೊಸಬರ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡುತ್ತಿದ್ದಾರೆ.
ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದ ಕಡೆಯಿಂದ ಹೊಸ ಅಪ್ಡೇಟ್ ಒಂದು ರವಿವಾರ ಹೊರಬಂದಿದೆ. ಅದು ಚಿತ್ರದ ಪ್ರಮುಖ ನಟ ನಟಿಯರ ಬಗ್ಗೆ.
ಈ ಹಿಂದೆ ಪಂಚತಂತ್ರ ಚಿತ್ರದಲ್ಲಿ ಮಿಂಚಿದ್ದ ವಿಹಾನ್ ಮತ್ತು ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಮುಂದಿನ ಸಪ್ಟೆಂಬರ್ ನಲ್ಲಿ ಶೂಟಿಂಗ್ ಆರಂಭವಾಗಲಿದೆ ಎನ್ನುತ್ತಿದೆ ಚಿತ್ರತಂಡ.
ಇದನ್ನೂ ಓದಿ:‘ಓ ಮೈ ಲವ್’ ಚಿತ್ರ ವಿಮರ್ಶೆ: ಕಾಲೇಜ್ ಕ್ಯಾಂಪಸ್ ನಲ್ಲಿ ಕಲರ್ಫುಲ್ ಲವ್ಸ್ಟೋರಿ
ರಕ್ಷಿತ್ ಶೆಟ್ಟಿಯವರ ಸೆವೆನ್ ಆಡ್ಸ್ ತಂಡದಲ್ಲಿದ್ದ ಚಂದ್ರಜಿತ್ ಬೆಳ್ಳಿಯಪ್ಪ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ಕಥಾ ಸಂಗಮ ಚಿತ್ರದಲ್ಲಿ ‘ರೇನ್ ಬೋ ಲ್ಯಾಂಡ್’ ಎಂಬ ಭಾಗವನ್ನು ಚಂದ್ರಜಿತ್ ನಿರ್ದೇಶನ ಮಾಡಿದ್ದರು.
— Chandrajith Belliappa Chan (@chandrajithChan) July 17, 2022
ಈ ಚಿತ್ರಕ್ಕೆ ಶ್ರೀವತ್ಸ ಸೆಲ್ವರಾಜನ್ ಛಾಯಾಗ್ರಹಣವಿದ್ದು, ಗಗನ್ ಬಡೇರಿಯಾ ಸಂಗೀತ ನಿರ್ದೇಶನವಿದೆ. ಚಿತ್ರದ ಇತರ ತಾರಾಗಣದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ