ಶಿವಣ್ಣ ರುಸ್ತುಂಗಾಗಿ ವಿಲನ್‌ ಹುಡುಕಾಟ

Team Udayavani, Apr 18, 2018, 10:59 AM IST

Rustom-Photo-Shoot.jpg

ಶಿವರಾಜಕುಮಾರ್‌ ಅವರ “ರುಸ್ತುಂ’ ಚಿತ್ರಕ್ಕೆ ಕೆಲವು ದಿನಗಳ ಹಿಂದೆ ಫೋಟೋಶೂಟ್‌ ನಡೆದಿರುವುದು ನಿಮಗೆ ಗೊತ್ತೇ ಇದೆ. ಚಿತ್ರದ ಮುಹೂರ್ತ ಏಪ್ರಿಲ್‌ 24ರಂದು ನಡೆಯಲಿದೆ. ಶಿವರಾಜಕುಮಾರ್‌ ಜೊತೆ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್‌, ಮಯೂರಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿನ ಪ್ರಮುಖ ಪಾತ್ರವೊಂದಕ್ಕೆ ಬಾಲಿವುಡ್‌ನ‌ ಖ್ಯಾತ ನಟರೊಬ್ಬರನ್ನು ಕರೆತರುವ ಆಲೋಚನೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು.

ಸಂಜಯ್‌ ದತ್‌, ಅನಿಲ್‌ ಕಪೂರ್‌, ಸುನೀಲ್‌ ಶೆಟ್ಟಿ ಹಾಗೂ ಮನೋಜ್‌ ಬಾಜ್‌ಪೇಯಿ ಅವರಲ್ಲಿ ಒಬ್ಬರನ್ನು “ರುಸ್ತುಂ’ಗೆ ಕರೆತರುವ ಯೋಚನೆ ಇದೆ ಎಂದಿತ್ತು ಚಿತ್ರತಂಡ. ಆದರೆ, ಯಾರು ಮಾಡುತ್ತಾರೆಂಬುದು ಇನ್ನೂ ಅಂತಿಮವಾಗಿಲ್ಲ. ಚಿತ್ರತಂಡ ಈಗ ಕೇವಲ ಬಾಲಿವುಡ್‌ ಅಷ್ಟೇ ಅಲ್ಲದೇ, ತಮಿಳು, ತೆಲುಗಿನ ಖ್ಯಾತ ನಟರುಗಳ ಬಗ್ಗೆಯೂ ಗಮನಹರಿಸಿದ್ದು, ಸದ್ಯದಲ್ಲೇ ಅಂತಿಮವಾಗಲಿದೆಯಂತೆ.

“ಚಿತ್ರದಲ್ಲಿ ಶಿವಣ್ಣ ಎದುರು ನಿಲ್ಲುವ ಪಾತ್ರಕ್ಕೂ ಹೆಚ್ಚಿನ ಪ್ರಾಮುಖ್ಯತೆ ಇದ್ದು, ಅದಕ್ಕಾಗಿ ನಟರ ಹುಡುಕಾಟ ನಡೆಯುತ್ತಿದೆ. ಈಗಾಗಲೇ ಹಿಂದಿ, ತೆಲುಗು ಹಾಗೂ ತಮಿಳಿನ ಕೆಲವು ಪ್ರಮುಖ ನಟರ ಜೊತೆ ಮಾತುಕತೆಯಾಗಿದೆ. ಅವರು ಈಗಾಗಲೇ ಬೇರೆ ಸಿನಿಮಾಗಳಲ್ಲಿ ತೊಡಗಿರುವುದರಿಂದ ಡೇಟ್ಸ್‌ ಹೊಂದಿಕೆಯಾಗುತ್ತಿಲ್ಲ. ಸದ್ಯದಲ್ಲೇ ಒಬ್ಬರು ಅಂತಿಮವಾಗಲಿದ್ದಾರೆ’ ಎನ್ನುವುದು ನಿರ್ದೇಶಕ ರವಿವರ್ಮ ಅವರ ಮಾತು.

ಅಂದಹಾಗೆ, ಸಾಹಸ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ರವಿವರ್ಮ ನಿರ್ದೇಶನದ ಚೊಚ್ಚಲ ಚಿತ್ರ “ರುಸ್ತುಂ’. “ಈ ಚಿತ್ರದಲ್ಲಿ ಶಿವಣ್ಣ ಪಾತ್ರ ತುಂಬಾ ಭಿನ್ನವಾಗಿದೆ. ಹೊಸ ಶೈಲಿಯಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ’ ಎನ್ನುತ್ತಾರೆ ಅವರು.  ಚಿತ್ರದಲ್ಲಿ ತೆಲುಗು ನಟ ಶತ್ರು ಕೂಡಾ ವಿಲನ್‌ ಆಗಿ ನಟಿಸುತ್ತಿದ್ದಾರೆ. ಇನ್ನು, ಏಪ್ರಿಲ್‌ 24ರಂದು ಚಿತ್ರ ಸೆಟ್ಟೇರಲಿದ್ದು, ಮೇ 10 ರಿಂದ ಚಿತ್ರೀಕರಣ ಆರಂಭವಾಗಲಿದೆಯಂತೆ. ಬೆಂಗಳೂರು, ಬಿಹಾರ ಸೇರಿದಂತೆ ನಾನಾ ಕಡೆಗಳಲ್ಲಿ ಚಿತ್ರೀಕರಣವಾಗಲಿದೆ.

“ರುಸ್ತುಂ’ ಚಿತ್ರವನ್ನು ಜಯಣ್ಣ ಕಂಬೈನ್ಸ್‌ನಡಿ ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸುತ್ತಿದ್ದು, ಈ ಸಂಸ್ಥೆಗೆ ಶಿವರಾಜಕುಮಾರ್‌ ಮಾಡುತ್ತಿರುವ ಮೂರನೆಯ ಚಿತ್ರ ಇದಾಗಿದೆ. ಇದಕ್ಕೂ ಮುನ್ನ ಜಯಣ್ಣ ಫಿಲಮ್ಸ್‌ನ “ಬಂಗಾರ – ಸನ್‌ ಆಫ್ ಬಂಗಾರದ ಮನುಷ್ಯ’ ಹಾಗೂ “ಮಫ್ತಿ’ ಚಿತ್ರಗಳಲ್ಲಿ ಶಿವರಾಜಕುಮಾರ್‌ ನಟಿಸಿದ್ದರು. ಈಗ ಇದೇ ಸಂಸ್ಥೆಯ “ರುಸ್ತುಂ ಚಿತ್ರದಲ್ಲೂ ಶಿವರಾಜಕುಮಾರ್‌ ನಟಿಸಲಿದ್ದಾರೆ. 

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.