
ವಿನು ಬಳಂಜ ನಿರ್ದೇಶನದ ‘ಬೇರ’ ಟ್ರೇಲರ್ ರಿಲೀಸ್
Team Udayavani, May 25, 2023, 6:42 PM IST

ಈ ಹಿಂದೆ ಕಿರುತೆರೆಯಲ್ಲಿ ಧಾರಾವಾಹಿ ನಿರ್ದೇಶನದ ಮೂಲಕ ಗುರುತಿಸಿಕೊಂಡಿರುವ ವಿನು ಬಳಂಜ “ಬೇರ’ ಎಂಬ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿರುವುದು ನಿಮಗೆ ಗೊತ್ತೇ ಇದೆ. ಇತ್ತೀಚೆಗಷ್ಟೇ “ಬೇರ’ ಚಿತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಿದ್ದ ಚಿತ್ರತಂಡ, ಈಗ ಟ್ರೇಲರ್ ಬಿಡುಗಡೆ ಮಾಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.”ಎಸ್. ಎಲ್.ವಿ ಕಲರ್ಸ್’ ಲಾಂಛನದಲ್ಲಿ ದಿವಾಕರ ದಾಸ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಚಿತ್ರದ ಹಾಗೂ ತಮ್ಮ ಜರ್ನಿಯ ಬಗ್ಗೆ ಮಾತನಾಡುವ ನಿರ್ದೇಶಕ ವಿನು ಬಳಂಜ, “ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ಬೇರ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ಯಾವ ತಾಯಂದ್ರ ಮಕ್ಕಳೂ ಇನ್ನೊಬ್ಬರಿಂದಾಗಿ ಸಾಯಬಾರದು ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತವೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು.
ಚಿತ್ರದಲ್ಲಿ ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣತ್ಛ, ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
