ವೋಟ್‌ ಫಾರ್‌ ಇಂಡಿಯಾ ಹೊಸಬರ ಸಿನಿಮಾ ಶುರು

Team Udayavani, Jan 12, 2017, 11:28 AM IST

Vote-for-India-(21).jpg

ಹಣ, ಜಾತಿ, ವೋಟು ಈ ವಿಷಯ ಇಟ್ಟುಕೊಂಡು ಈಗಾಗಲೇ ಹಲವು ಸಿನಿಮಾಗಳು ಬಂದು ಹೋಗಿವೆ. ಆ ಸಾಲಿಗೆ ಈಗ ಹೊಸಬರ “ವೋಟ್‌ ಪಾರ್‌ ಇಂಡಿಯಾ’ ಎಂಬ ಹೊಸ ಚಿತ್ರವೂ ಸೇರಿದೆ. ನೋಟು ಅಮಾನ್ಯ ಬಳಿಕ ಆದಂತಹ ಘಟನೆಗಳೇನು, ಸಾರ್ವಜನಿಕರಿಗೆ ಎಷ್ಟೆಲ್ಲಾ ತೊಂದರೆ ಉಂಟಾಯಿತು. ಅದಕ್ಕೆ ಮುಖ್ಯ ಕಾರಣ ಯಾರು ಎಂಬ ವಿಷಯ ಕುರಿತಂತೆ ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಅಂದಹಾಗೆ, ಈ ಚಿತ್ರದ ಮೂಲಕ ಶಾಂತು ಯಾದವ್‌ ನಿರ್ದೇಶಕರಾಗುತ್ತಿದ್ದಾರೆ.

ನೋಟಿನ ಸುದ್ದಿ ಎಲ್ಲೆಡೆ ಸದ್ದು ಮಾಡಿದ್ದೇ ತಡ, ಆ ನೋಟಿನ ವಿಷಯ ಇಟ್ಟುಕೊಂಡು, ವೋಟಿನ ಕಥೆ ಹೇಳಲು ಹೊರಟಿದ್ದಾರೆ ಶಾಂತು. ನೋಟು ರದ್ದು ಪ್ರಕರಣದ ವಿಷಯ ಹೇಳುವುದರ ಜತೆಯಲ್ಲೇ ವೋಟಿನ ಮಹತ್ವ ಕುರಿತು ಒಂದಷ್ಟು ಹೊಸ ಸಂಗತಿಗಳನ್ನು ಬಿಚ್ಚಿಡುವ ಪ್ರಯತ್ನ ಈ ಸಿನಿಮಾ ಮೂಲಕ ಆಗಲಿದೆ ಎಂಬುದು ಅವರ ಮಾತು. ಇನ್ನು, “ಶ್ರೀರಂಗ ಸಿನಿಮಾಸ್‌’ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನೋಟು ರದ್ದು ಮಾಡಿದ ಬಗ್ಗೆ ಹೇಳಿದ ಮಾತಿನ ದೃಶ್ಯಗಳ ತುಣುಕು, ಬ್ಯಾಂಕ್‌ಗಳ ಮುಂದೆ ಸಾಲುಗಟ್ಟಿದ್ದ ಗ್ರಾಹಕರ ಚಿತ್ರಣ ಇಟ್ಟುಕೊಂಡ ಟೀಸರ್‌ವೊಂದನ್ನು ರಿಲೀಸ್‌ ಮಾಡಿದ ಚಿತ್ರತಂಡ, ನೋಟು ಅಮಾನ್ಯವಾದ ನಂತರ ಒಂದಷ್ಟು ಬ್ಯಾಂಕ್‌ಗಳು ಕಾನೂನು ಬಾಹಿರ ಚಟುವಟಿಕೆ ನಡೆಸುವ ಮೂಲಕ ಕಪ್ಪುಹಣವನ್ನು ಬಿಳಿ ಹಣವನ್ನಾಗಿಸಿವೆ. ಇದರಿಂದ ಜನರಿಗೆ ಸಮಸ್ಯೆಯಾಗಿದ್ದು ನಿಜ. ಅದೆಲ್ಲಾ ಆಗಿದ್ದು ಹೇಗೆ, ಎಂಬಿತ್ಯಾದಿ ಕುರಿತು ಚಿತ್ರದಲ್ಲಿ ವಿವರವಾಗಿ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆಯಂತೆ.

ನಿರ್ಮಾಪಕಿ ಪ್ರೇಮಾ ರಂಗನಾಥ್‌ ಅವರ ಪುತ್ರ ಕಾರ್ತಿಕ್‌ ಚಿತ್ರದ ನಾಯಕ. ಇವರೊಂದಿಗೆ ರಕ್ಷಕ್‌ ಕೂಡ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಹೇಶ್‌ ಅಮ್ಮಳ್ಳಿ ದೊಡ್ಡಿ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. “ಮತ ಹಾಕುವಾಗ ದೇಶದ ಬಗ್ಗೆ ಪ್ರತಿಯೊಬ್ಬ ಮತದಾರ ಯೋಚಿಸಬೇಕು, ಹಣ, ಜಾತಿ ನೋಡಿ ಮತ ಹಾಕಬಾರದು ಎಂದ ಸಣ್ಣದ್ದೊಂದು ಸಂದೇಶ ಚಿತ್ರದಲ್ಲಿದೆ ಎಂಬುದು ಮಹೇಶ್‌ ಮಾತು. 

ನಿರ್ಮಾಪಕ ಭಾ.ಮಾ. ಹರೀಶ್‌, ಮಮತಾಶ್ರೀ ಇತರರು ಚಿತ್ರತಂಡಕ್ಕೆ ಶುಭಕೋರಿದ್ದಾರೆ. ದೀಪಿಕಾ ಅವಿನಾಶ್‌ ಹಾಗೂ ಅವಿನಾಶ್‌ ಸಹ ನಿರ್ಮಾಪಕರಾಗಿ ಸಾಥ್‌ ಕೊಡುತ್ತಿದ್ದಾರೆ. ಜನವರಿ 21ರಿಂದ ಶೂಟಿಂಗ್‌ ಶುರುವಾಗುತ್ತಿದ್ದು, ಏಪ್ರಿಲ್‌ ಹೊತ್ತಿಗೆ ಚಿತ್ರವನ್ನು ರಿಲೀಸ್‌ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.