ಕೆಜಿಎಫ್-2 ಚಿತ್ರೀಕರಣಕ್ಕೆ ಹೊರಟ ಯಶ್‌

Team Udayavani, Dec 5, 2019, 12:29 PM IST

ಈ ವಾರ ಬಳ್ಳಾರಿಯತ್ತ ಚಿತ್ರ ತಂಡದ ಪಯಣ ಕನ್ನಡದಲ್ಲಿ ಸದ್ಯಕ್ಕೆ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಚಿತ್ರ “ಕೆಜಿಎಫ್-2′. ನಟ ಯಶ್‌ ಅವರು ಕೆಲವು ದಿನಗಳಿಂದಲೂ ಈ ಚಿತ್ರದ ಚಿತ್ರೀಕರಣದಿಂದ ಬ್ರೇಕ್‌ ಪಡೆದಿದ್ದರು. ಕಾರಣ, ಪತ್ನಿ ಹಾಗು ಮಗಳ ಜೊತೆ ಸಮಯ ಕಳೆಯಲು. ಇತ್ತೀಚೆಗೆ
ತನ್ನ ಮಗಳ ಹುಟ್ಟುಹಬ್ಬ ಕೂಡ ಅದ್ಧೂರಿಯಾಗಿ ಆಚರಿಸಿದ ಯಶ್‌, ಈಗ “ಕೆಜಿಎಫ್-2′ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಚಿತ್ರದ ಚಿತ್ರೀಕರಣ ಬೆಂಗಳೂರಲ್ಲಿ ನಡೆಯುತ್ತಿದ್ದು, ಬುಧವಾರ ಯಶ್‌ ತಂಡ ಸೇರಿಕೊಂಡಿದ್ದಾರೆ. ಎರಡು ದಿನಗಳ ಕಾಲ ಬೆಂಗಳೂರಲ್ಲಿ ನಡೆಯಲಿರುವ ಚಿತ್ರೀಕರಣ ಆ ನಂತರ ಬಳ್ಳಾರಿಯತ್ತ ಪಯಣ ಬೆಳೆಸಲಿದೆ. ಬಳ್ಳಾರಿಯಲ್ಲಿ ಚಿತ್ರದ ಮುಖ್ಯ ದೃಶ್ಯಗಳನ್ನು ಚಿತ್ರೀಕರಿಸಲು ನಿರ್ದೇಶಕ
ಪ್ರಶಾಂತ್‌ ನೀಲ್‌ ತಯಾರಿ ನಡೆಸಿದ್ದಾರೆ.

ಇನ್ನು “ಕೆಜಿಎಫ್-2′ ಚಿತ್ರ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿರುವುದು ನಿಜ. ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ದತ್‌ ಹಾಗು ನಟಿ ರವೀನಾ ಟಂಡನ್‌ ಕೂಡ  ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಪಾತ್ರದ ಮೂಲಕ ರವೀನಾ ಟಂಡನ್‌ ಗಮನಸೆಳೆಯಲಿದ್ದಾರೆ. ಅದರೊಂದಿಗೆ
ಸಂಜಯ್‌ದತ್‌ ಅವರು ಸಹ ಅಧೀರ ಎಂಬ ಭಯಂಕರವಾಗಿರುವ ಪಾತ್ರದ ಮೂಲಕ ಎಂಟ್ರಿಕೊಟ್ಟಿದ್ದಾರೆ. ಅವರ ಭಾಗದ ಕೆಲ ದೃಶ್ಯಗಳನ್ನೂ ಚಿತ್ರೀಕರಿಸಲಾಗಿದೆ.

ಚಿತ್ರದಲ್ಲಿ ಶ್ರೀನಿಧಿ ನಾಯಕಿಯಾಗಿ ಕಾಣಿಸಿಕೊಂಡರೆ, ಉಳಿದಂತೆ ಹಿರಿಯ ನಟ ಅನಂತ್‌ನಾಗ್‌, ಮಾಳವಿಕ ಅವಿನಾಶ್‌, ಅಚ್ಯುತ ಇತರರು ನಟಿಸುತ್ತಿದ್ದಾರೆ. ಸದ್ಯಕ್ಕಂತೂ ಎಲ್ಲೆಡೆ ನಿರೀಕ್ಷೆ ಹುಟ್ಟಿಸಿರುವ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಜೋರಾಗಿ ನಡೆಯುತ್ತಿದ್ದು, ಎಲ್ಲಾ
ಅಂದುಕೊಂಡಂತೆ ನಡೆದರೆ, 2020 ರ ಬೇಸಿಗೆ ರಜೆಯಲ್ಲಿ ಚಿತ್ರ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

“ಕೆಜಿಎಫ್’ ಬಿಡುಗಡೆ ನಂತರ ಎಲ್ಲೆಡೆ ಜೋರು ಸುದ್ದಿಯಾದ ಹಿನ್ನೆಲೆಯಲ್ಲಿ ಈಗ “ಕೆಜಿಎಫ್-2′ ಚಿತ್ರದ ಮೇಲೂ ಸಾಕಷ್ಟು ನಿರೀಕ್ಷೆ ಇರುವುದು ಸುಳ್ಳಲ್ಲ. ಈ ಬಾರಿ ನಿರ್ದೇಶಕ ಪ್ರಶಾಂತ್‌ ನೀಲ್‌ ಅವರು, ಸಾಕಷ್ಟು ಪ್ಲಾನ್‌ ಮಾಡಿಕೊಂಡೇ  ಚಿತ್ರೀಕರಣಕ್ಕೆ ಅಣಿಯಾಗಿದ್ದು, ಬೇಗ ಪ್ರೇಕ್ಷಕರ ಮುಂದೆ ತರುವ ಪ್ರಯತ್ನದಲ್ಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...