Zaid Khan; ಜಮೀರ್ ಪುತ್ರನ ಹೊಸ ಚಿತ್ರದ ಪೋಸ್ಟರ್ ಬಂತು
Team Udayavani, Mar 21, 2024, 12:03 PM IST
“ಬನಾರಸ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದ,ಸಚಿವ ಜಮೀರ್ ಅಹ್ಮದ್ ಪುತ್ರ ನಟ ಝೈದ್ ಖಾನ್ ಹಾಗೂ “ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ನಲ್ಲಿ ಹೊಸ ಸಿನಿಮಾವೊಂದು ಆರಂಭವಾಗುತ್ತಿರುವ ವಿಷಯ ಕೆಲ ದಿನಗಳ ಹಿಂದಷ್ಟೇ ಬಹಿರಂಗವಾಗಿತ್ತು. ಆ ಸುದ್ದಿಯ ಬೆನ್ನಲ್ಲೇ ಝೈದ್ ಖಾನ್ ಮತ್ತು ಅನಿಲ್ ಕುಮಾರ್ ಜೋಡಿಯ ಈ ಹೊಸ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.
ಇನ್ನು ಬಿಡುಗಡೆಯಾಗಿರುವ ಸಿನಿಮಾದ ಪೋಸ್ಟರ್ನಲ್ಲಿ ಕೈಯಲ್ಲಿ ಮದ್ಯದ ಬಾಟಲ್ ಮತ್ತು ಸಿಗರೇಟ್ ಹಿಡಿದು ಕೊಂಡು ಹುಡುಗಿ ಫೋಟೋ ಮುಂದೆ ಕೂತಿ ರುವ ಭಗ್ನ ಪ್ರೇಮಿಯ ಲುಕ್ನಲ್ಲಿ ನಾಯಕನನ್ನು ತೋರಿಸಲಾಗಿದ್ದು, ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಹರಿದಾಡುತ್ತಿದೆ.
ಇನ್ನು ಚಿತ್ರತಂಡದ ಮೂಲಗಳ ಪ್ರಕಾರ, ಇದೇ ಯುಗಾದಿ ಹಬ್ಬದ ವೇಳೆಗೆ ಈ ಸಿನಿಮಾದ ಟೈಟಲ್ ಟೀಸರ್ ಮತ್ತು ಫಸ್ಟ್ಲುಕ್ ರಿಲೀಸ್ ಮಾಡುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.
ಅಂದಹಾಗೆ, ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, “ಆಶ್ರಿತ್ ಸಿನಿಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗು ತ್ತಿರುವ ಈ ಸಿನಿಮಾಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸು ತ್ತಿದ್ದಾರೆ. ಜೆ. ಎಸ್ ವಾಲಿ ಛಾಯಾಗ್ರಹಣ, ಕೆ. ಎಂ. ಪ್ರಕಾಶ್ ಸಂಕಲನವಿದೆ. ಸಿನಿಮಾಕ್ಕೆ ರವಿವರ್ಮ ಸಾಹಸ ನಿರ್ದೇಶನವಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಈ ವರ್ಷಾಂತ್ಯಕ್ಕೆ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್