ನಟ ಸೋನು ಸೂದ್ ಪಾದಕ್ಕೆ ನಮಿಸಲು ಮುಂದಾದ ಜನರು
Team Udayavani, May 24, 2021, 4:00 PM IST
ಮುಂಬೈ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್ ಅದೆಷ್ಟೋ ಜನರಿಗೆ ದೇವರಂತಾಗಿದ್ದಾರೆ. ಕಷ್ಟದ ಕಾಲದಲ್ಲಿ ನೆರವಿಗೆ ನಿಂತಿರುವ ಈ ನಟನಿಗೆ ಎಲ್ಲಿಲ್ಲದ ಗೌರವ ಸಿಗುತ್ತಿದೆ. ಜನರು ಈತನ ಫೋಟೊಗಳನ್ನಿಟ್ಟು ಪೂಜೆ ಮಾಡುತ್ತಿದ್ದಾರೆ.
ಕೂಲಿ ಕಾರ್ಮಿಕರಿಗೆ, ಚಿಕಿತ್ಸೆ ಪಡೆಯಲು ಪರಿತಪಿಸುತ್ತಿರುವ ಬಡ ಕೋವಿಡ್ ರೋಗಿಗಳಿಗೆ ಸೋನು ಸೂದ್ ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಹೀಗೆ ಜನ ಸೇವೆಯಲ್ಲಿ ತೊಡಗಿರುವ ಸೋನು ಸೂದ್ ಅವರ ಕಾಲಿಗೆ ಜನ ಬೀಳಲು ಮುಂದಾಗಿರುವ ದೃಶ್ಯಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಮುಂಬೈನಲ್ಲಿರುವ ಸೋನು ಸೂದ್ ಮನೆಯ ಎದುರು ಇತ್ತೀಚೆಗೆ ಕೆಲವರು ಬಂದು ಸಹಾಯ ಕೇಳಿದ್ದಾರೆ. ತಮ್ಮ ಕಷ್ಟಕ್ಕೆ ಸ್ಪಂದಿಸಿದ ನಟನ ಕಾಲಿಗೆ ಬೀಳಲು ಅವರೆಲ್ಲ ಮುಂದಾಗಿದ್ದಾರೆ. ವಯಸ್ಸಿನಲ್ಲಿ ಹಿರಿಯರಾದವರು ಕೂಡ ಭಾವುಕರಾಗಿ ಸೋನು ಪಾದ ಮುಟ್ಟಿ ನಮಸ್ಕರಿಸಲು ಬಂದಿದ್ದಾರೆ. ಆದರೆ ಅದಕ್ಕೆ ಸೋನು ಅವಕಾಶ ನೀಡಿಲ್ಲ. ವಿನಯವಂತಿಕೆಯಿಂದ ಹಿಂದೆ ಸರಿದು, ಎಲ್ಲರಿಗೂ ಕೈ ಮುಗಿದಿದ್ದಾರೆ.
ಇನ್ನು ಸೋನು ಸೂದ್ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಇನ್ನೊಂದೆಡೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಕೂಡ ಏರಿಕೆ ಆಗುತ್ತಿದೆ. ಸೋನು ಸೂದ್ ಹೆಸರಿನಲ್ಲಿ ಹಣ ಮಾಡಲು ಕೂಡ ಕೆಲವು ಕಿಡಿಗೇಡಿಗಳು ಮುಂದಾಗಿದ್ದಾರೆ. ಸೋನು ಸೂದ್ ಫೌಂಡೇಶನ್ಗೆ ಹಣ ದೇಣಿಗೆ ನೀಡಿ ಎಂದು ನಕಲಿ ಗೂಗಲ್ ಪೇ ನಂಬರ್ ಇರುವ ಪೋಸ್ಟರ್ಗಳು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಹರಿದಾಡಿದ್ದವು. ಅವುಗಳ ಸ್ಕ್ರೀನ್ ಶಾಟ್ ಹಂಚಿಕೊಂಡ ಸೋನು ಸೂದ್, ಇದೆಲ್ಲವೂ ಫೇಕ್ ಎಂಬುದನ್ನು ಸ್ಪಷ್ಟಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…