Aishwarya-Abhishek ಡಿವೋರ್ಸ್‌ ವದಂತಿ..: ಕೊನೆಗೂ ಪ್ರತಿಕ್ರಿಯೆ ನೀಡಿದ ಅಭಿಷೇಕ್‌ ಬಚ್ಚನ್

Team Udayavani, Aug 12, 2024, 12:18 PM IST

Aishwarya-Abhishek divorce rumours: Abhishek Bachchan finally responded

ಮುಂಬೈ: ಬಾಲಿವುಡ್‌ ಬಿಗ್‌ ಬಿ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಕಳೆದ ಕೆಲವು ವಾರಗಳಿಂದ ಬರುತ್ತಿದೆ. ನಟ ಅಭಿಷೇಕ್ ಬಚ್ಚನ್ (Abhishek bachchan) ಮತ್ತು ಐಶ್ವರ್ಯ ರೈ (Aishwarya rai) ಅವರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಗಳು ಜೋರಾಗಿಯೇ ಹರಿದಾಡುತ್ತಿದೆ ಇದರ ನಡುವೆ, ಅಭಿಷೇಕ್ ಬಚ್ಚನ್ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಿದ್ದು, ತನ್ನ ಮದುವೆ ಉಂಗುರ ತೋರಿಸಿ ವದಂತಿ ನಿರಾಕರಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಅದರ ಬಗ್ಗೆ ನಾನು ನಿಮಗೆ ಹೇಳಲು ಏನೂ ಇಲ್ಲ. ನೀವೆಲ್ಲರೂ ಸುದ್ದಿಗಳನ್ನು ಈಗಾಗಲೇ ಹೊರಹಾಕಿದ್ದೀರಿ. ನೀವು ಅದನ್ನು ಏಕೆ ಮಾಡುತ್ತಿದ್ದೀರಿ ಎಂದು ನನಗೆ ಅರ್ಥವಾಗಿದೆ. ನೀವು ಕೆಲವು ಸುದ್ದಿಗಳನ್ನು ಫೈಲ್ ಮಾಡಬೇಕಾಗುತ್ತದೆ. ಪರವಾಗಿಲ್ಲ, ನಾವು ಸೆಲೆಬ್ರಿಟಿಗಳು, ನಾವು ಅದನ್ನು ತೆಗೆದುಕೊಳ್ಳಲೇಬೇಕು” ಎಂದಿದ್ದಾರೆ.

ಅಭಿಷೇಕ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ವಿಚ್ಛೇದನದ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಕೆಲ ವಾರಗಳಿಂದ ಮುನ್ನಲೆಯಲ್ಲಿದೆ. ಕಳೆದ ತಿಂಗಳು ನಡೆದ ಹೈಪ್ರೊಫೈಲ್‌ ವಿವಾಹ ಸಮಾರಂಭದಲ್ಲಿ ಅಭಿಷೇಕ್‌ ಮತ್ತು ಐಶ್ವರ್ಯಾ ಬೇರೆ ಬೇರೆಯಾಗಿ ಕಾಣಿಸಿಕೊಂಡಿದ್ದರು. ಅಭಿಷೇಕ್‌ ಅವರು ತಂದೆ ತಾಯಿಯ ಜೊತೆ ಮದುವೆಗೆ ಬಂದರೆ, ಐಶ್ವರ್ಯಾ ಅವರು ಮಗಳು ಆರಾಧ್ಯ ಜೊತೆ ಆಗಮಿಸಿದ್ದರು.

ಇದರ ಬೆನ್ನಲ್ಲೇ ಅಭಿಷೇಕ್‌ ಬಚ್ಚನ್‌ ಅವರು ಡಿವೋರ್ಸ್‌ ಬಗೆಗಿನ ಪೋಸ್ಟ್‌ ಒಂದನ್ನು ಇನ್ಸ್ಟಾಗ್ರಾಮ್‌ ನಲ್ಲಿ ಲೈಕ್‌ ಮಾಡಿದ್ದರು. ಇದು ಅವರ ವಿಚ್ಚೇದನದ ಸುದ್ದಿಗೆ ಇನ್ನಷ್ಟು ವೇಗ ನೀಡಿತ್ತು.

2007ರಲ್ಲಿ ಮಾಜಿ ವಿಶ್ವ ಸುಂದರಿ, ನಟಿ ಐಶ್ವರ್ಯ ರೈ ಮತ್ತು ಅಭಿಷೇಕ್‌ ಬಚ್ಚನ್‌ ವಿವಾಹವಾಗಿದ್ದರು. 2011ರ ನವೆಂಬರ್‌ ನಲ್ಲಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ಏಪ್ರಿಲ್‌ ನಲ್ಲಿ ವಿವಾಹದ 17ನೇ ವಾರ್ಷಿಕೋತ್ಸವದ ದಿನದಂದು ಐಶ್ವರ್ಯ ತಮ್ಮ ವೆಡ್ಡಿಂಗ್‌ ಆಲ್ಬಮ್‌ ನ ಫೋಟೊಗಳನ್ನು ಪೋಸ್ಟ್‌ ಮಾಡಿದ್ದರು.

ಟಾಪ್ ನ್ಯೂಸ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.