ಪೊನ್ನಿಯನ್ ಸೆಲ್ವನ್ -2 ಚಿತ್ರಕ್ಕಾಗಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು ಗೊತ್ತಾ?
Team Udayavani, May 12, 2023, 4:05 PM IST
ವಿಶ್ವದ ಅತ್ಯಂತ ಸುಂದರ ನಟಿಯರಲ್ಲಿ ಒಬ್ಬರಾದ ಐಶ್ವರ್ಯಾ ರೈ ಬಚ್ಚನ್ ಇತ್ತೀಚೆಗೆ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ 2 (PS 2) ನಲ್ಲಿ ಅಭಿನಯದ ಮೂಲಕ ಮತ್ತೊಮ್ಮೆ ತಮ್ಮ ಅಭಿಮಾನಿಗಳನ್ನು ಗೆದ್ದಿದ್ದಾರೆ.
ಐತಿಹಾಸಿಕ ಕಥಾಹಂದರ ಚಿತ್ರದಲ್ಲಿ ಐಶ್ವರ್ಯ ರೈ ಅವರು ನಂದಿನಿ ಎಂಬ ಪಾತ್ರದಲ್ಲಿ ಮಿಂಚಿದ್ದಾರೆ. ಚೋಳ ಸಾಮ್ರಾಜ್ಯದ ಕಥೆಯುಳ್ಳ ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್ ಜತೆಗೆ, ಚಿಯಾನ್ ವಿಕ್ರಮ್, ಕಾರ್ತಿ, ತ್ರಿಶಾ ಕೃಷ್ಣನ್ ಮತ್ತು ಸೋಭಿತಾ ಧೂಳಿಪಾಲ, ಐಶ್ವರ್ಯ ಲಕ್ಷ್ಮಿ ಮತ್ತು ಜಯಂ ರವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಕೆಲವು ದಿನಗಳ ಹಿಂದೆ ತೆರೆಕಂಡ ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 300 ಕೋಟಿ ರೂಪಾಯಿಗಳನ್ನು ಗಳಿಸಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್ ಕಟ್ ಹೇಳಿದ ಚಿತ್ರಕ್ಕೆ ಎ ಆರ್ ರಹಮಾನ್ ಸಂಗೀತವಿದೆ. ಚಿತ್ರದ ಮೊದಲ ಭಾಗವೂ ಸೂಪರ್ ಹಿಟ್ ಆಗಿತ್ತು.
ಐಶ್ವರ್ಯಾ ರೈ ಮತ್ತು ಇತರ ತಾರಾ ಬಳಗದ ಸದಸ್ಯರ ಸಂಭಾವನೆಗಳ ಬಗ್ಗೆ ವರದಿಗಳು ಇಂಟರ್ನೆಟ್ ನಲ್ಲಿ ಸುತ್ತುತ್ತಿವೆ. ಫೈನಾನ್ಶಿಯಲ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, ಪಿಎಸ್ 2 ನಲ್ಲಿ ಕ್ವೀನ್ ನಂದಿನಿ ಪಾತ್ರಕ್ಕಾಗಿ ಐಶ್ವರ್ಯಾ 10 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಅಲ್ಲದೆ, ಪ್ರಮುಖ ನಟ ಚಿಯಾನ್ ವಿಕ್ರಮ್ ಅವರು 12 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಇವರಿಬ್ಬರು ಪೊನ್ನಿಯಿನ್ ಸೆಲ್ವನ್ 2 ತಂಡದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಟರಾಗಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ