ಕೋವಿಡ್ 19 ಸೋಂಕು ದೃಢ; ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು
ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಗಾಗಿ ಪ್ರತಿಯೊಬ್ಬರಿಗೂ ಅಭಿನಂದನೆ ತಿಳಿಸುವುದಾಗಿ ಅಕ್ಷಯ್ ಹೇಳಿದ್ದಾರೆ.
Team Udayavani, Apr 5, 2021, 11:39 AM IST
ಮುಂಬಯಿ:ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಹೆಚ್ಚಾದರೆ ಹಂತ ಹಂತವಾಗಿ ಒಂದೊಂದು ಚಟುವಟಿಕೆಗಳಿಗೆ ನಿಷೇಧ: ಸುಧಾಕರ್
ಅಕ್ಷಯ್ ಕುಮಾರ್ ಅವರು ಭಾನುವಾರ(ಏ.4) ಸಂಜೆ 5ಗಂಟೆಗೆ ಮುಂಬೈನ ಹೀರಾನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅಕ್ಷಯ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅಕ್ಷಯ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಭಾನುವಾರ ತಿಳಿಸಿದ್ದು, ಮನೆಯಲ್ಲಿಯೇ ಐಸೋಲೇಶನ್ ನಲ್ಲಿ ಇರುವುದಾಗಿ ಹೇಳಿದ್ದರು. ಆದರೆ ನಂತರ ವೈದ್ಯರ ಸಲಹೆ ಮೇರೆಗೆ ಹೀರಾನಂದಾನಿ ಆಸ್ಪತ್ರೆಗೆ ದಾಖಲಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಗಾಗಿ ಪ್ರತಿಯೊಬ್ಬರಿಗೂ ಅಭಿನಂದನೆ ತಿಳಿಸುವುದಾಗಿ ಅಕ್ಷಯ್ ಹೇಳಿದ್ದಾರೆ.
ಬಾಲಿವುಡ್ ನ ಅಲಿಯಾ ಭಟ್, ರಣಬೀರ್ ಕಪೂರ್ ಸೇರಿದಂತೆ ಹಲವು ನಟ, ನಟಿಯರು ಕೋವಿಡ್ 19 ಸೋಂಕಿಗೆ ಒಳಗಾಗಿದ್ದು, ಈ ನಿಟ್ಟಿನಲ್ಲಿ ಚಿತ್ರೀಕರಣದಿಂದ ದೂರ ಉಳಿದು, ಐಸೋಲೇಶನ್ ನಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?