ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಮಾತೃ ವಿಯೋಗ
Team Udayavani, Sep 8, 2021, 1:30 PM IST
ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು (ಸೆ.8) ನಿಧನರಾಗಿದ್ದಾರೆ.
ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಇನ್ನು ಮಾತೃವಿಯೋಗದ ಕುರಿತು ಟ್ವೀಟ್ ಮಾಡಿರುವ ಅಕ್ಷಯ್ ಕುಮಾರ್, ‘ನನ್ನ ತಾಯಿಯೇ ನನ್ನ ಮೂಲ. ಇಂದು ನಾನು ನನ್ನ ಅಸ್ತಿತ್ವದ ಮೂಲದಲ್ಲಿ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.
ಅನೇಕ ದಿನಗಳಿಂದ ಅನಾರೊಗ್ಯ ಸಮಸ್ಯೆ ಎದುರಿಸುತ್ತಿದ್ದ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಳೆದೆರಡು ದಿನಗಳ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ತಮ್ಮ ‘ಸಿಂಡ್ರೆಲಾ’ ಸಿನಿಮಾ ಶೂಟಿಂಗ್ಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಮುಂಬೈಗೆ ದೌಡಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್