ʼಪುಷ್ಪ-2ʼ ಟೀಸರ್ ಗೆ ಡೇಟ್ ಫಿಕ್ಸ್? : ಅಲ್ಲು ಅಭಿಮಾನಿಗಳಿಗೆ ಡಬಲ್ ಧಮಾಕ
Team Udayavani, Feb 28, 2023, 4:55 PM IST
ಹೈದರಾಬಾದ್: ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ʼಪುಷ್ಪ-2ʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ರಿಲೀಸ್ ಗೂ ಮುನ್ನ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ.
ಸುಕುಮಾರ್ ನಿರ್ದೇಶನದ ಬಿಗ್ ಬಜೆಟ್ ಸಿನಿಮಾದಲ್ಲಿ ಮೊದಲ ಭಾಗಕ್ಕಿಂತ ಹೆಚ್ಚು ಆ್ಯಕ್ಷನ್ ಹಾಗೂ ಥ್ರಿಲ್ ಇರಲಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಹಂತದಲ್ಲೇ ಸಿನಿಮಾ ತಂಡದಿಂದ ಅಪ್ಡೇಟ್ ವೊಂದು ಹೊರ ಬಿದ್ದಿದೆ.
ಇದನ್ನೂ ಓದಿ: ಸಿಎಸ್ ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್
ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬಕ್ಕೆ ಅಂದರೆ ಏಪ್ರಿಲ್ 8 ರಂದು ʼಪುಷ್ಪ-2ʼ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ ಎನ್ನುವ ಬಗ್ಗೆ ವರದಿಯಾಗಿದೆ. ನಾಯಕ ನಟನ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡಲು ಪ್ಲ್ಯಾನ್ ಚಿತ್ರ ತಂಡ ಮಾಡಿಕೊಂಡಿದೆ ಎನ್ನಲಾಗಿದೆ.
ಸದ್ಯ ಅಲ್ಲು ಅರ್ಜುನ್ ಒಂದು ಹಂತದ ಶೂಟಿಂಗ್ ಮುಗಿಸಿ ರಾಜಸ್ಥಾನದಲ್ಲಿ ತನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ.
ಅಲ್ಲು ಅರ್ಜುನ್ ಬರ್ತ್ ಡೇ ದಿನ ಟೀಸರ್ ರಿಲೀಸ್ ಆದರೆ ಅಭಿಮಾನಿಗಳ ಪಾಲಿಗೆ ಡಬಲ್ ಖುಷಿ ಸಿಗಲಿದೆ. ಫಾಹದ್ ಫಾಸಿಲ್, ರಶ್ಮಿಕಾ ಮಂದಣ್ಣ ಮುಂತಾದ ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್