ಅಭಿಮಾನಿಯ ಬಳಿ ಕ್ಷಮೆಯಾಚಿಸಿದ ಬಿಗ್ ಬಿ: ಕಾರಣವೇನು?

ನನಗೆ ಈ ಕವಿತೆಯ ಸಾಲುಗಳು ಯಾರದ್ದು ಎಂಬುವುದು ತಿಳಿದಿರಲಿಲ್ಲ

Team Udayavani, Dec 30, 2020, 8:08 PM IST

ತಮ್ಮ ಅಭಿಮಾನಿಯ ಬಳಿ ಕ್ಷಮೆಯಾಚಿಸಿದ ಬಿಗ್ ಬಿ

ಮುಂಬೈ: 2020 ರ ಸಾಲಿನಲ್ಲಿ  ನಟ  ಅಮಿತಾಬ್ ಬಚ್ಚನ್ ಬಾಲಿವುಡ್ ಗೆ ಸಂಬಂಧಿಸಿದ ಹಲವು ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ ಇದೀಗ ತಮ್ಮ ಅಭಿಮಾನಿಯೊಬ್ಬರಿಗಾಗಿ ತಮ್ಮ  ಟ್ಟೀಟರ್ ಖಾತೆಯಲ್ಲಿ ಕ್ಷಮೆಯಾಚಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

ಕೆಲದಿನಗಳ ಹಿಂದೆ ನಟ ಅಮಿತಾಬ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕವಿತೆಯ ಸಾಲುಗಳೊಂದನ್ನು ಹಂಚಿಕೊಂಡಿದ್ದರು. ಇದಾದ ಬಳಿಕ  ಆ ಸಾಲುಗಳನ್ನು ಬರೆದ ಅವರ  ಅಭಿಮಾನಿ “ನೀವು ನಾನು ರಚಿಸಿರುವ ಕವಿತೆಯ ಸಾಲುಗಳನ್ನು ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ನನ್ನ ಪುಣ್ಯ. ಆದರೆ ಕವಿತೆಯ ಜೊತೆಗೆ ಅದನ್ನು ರಚಿಸಿರುವ ನನ್ನ ಹೆಸರನ್ನೂ ಸೇರಿಸಿದ್ದರೆ ಇನ್ನೂ ಸಂತೋಷವಾಗುತ್ತಿತ್ತು” ಎಂದಿದ್ದಾರೆ.

ಈ ಕುರಿತಾಗಿ  ತಮ್ಮ ಟ್ಟೀಟರ್ ಖಾತೆಯಲ್ಲಿ ಕ್ಷಮೆಯಾಚಿಸಿರುವ ಬಿಗ್ ಬಿ ಈ ಕವಿತೆಯು ತಿಶಾ ಅಗರ್ ವಾಲ್ ಅವರಿಗೆ ಸೇರಿದ್ದು. ನನಗೆ ಈ ಕವಿತೆಯ ಸಾಲುಗಳು ಯಾರದ್ದು ಎಂಬುವುದು ತಿಳಿದಿರಲಿಲ್ಲ. ಕವಿತೆಯ ಸಾಲುಗಳು ನನಗೆ ತುಂಬಾ ಇಷ್ಟವಾಯಿತು ಹಾಗಾಗಿ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಕವಿತೆಯ ಕತೃವಿನ ಹೆಸರು ಸೇರಿಸದ ಕಾರಣ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. ಅಮಿತಾಬ್ ಈ ರೀತಿ ಕ್ಷಮೆಯಾಚಿಸಿರುವ ಗುಣಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹೊಸವರ್ಷಕ್ಕೆ ಅಮೆಜಾನ್ ನಿಂದ  ‘ಮೆಗಾ ಸ್ಯಾಲರಿ ಡೇಸ್’ ಆಫರ್ ಮೇಳ

2020ರಲ್ಲಿ ನಟ  ಅಮಿತಾಬ್ ತಮ್ಮ ಟ್ವೀಟರ್ ಖಾತೆಯಲ್ಲಿ ಸಕ್ರಿಯರಾಗಿದ್ದು 44.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿವಯರ ನಂತರ ಅತೀ ಹೆಚ್ಚು ಜನರು ಫಾಲೋ ಮಾಡುತ್ತಿರುವ ವ್ಯಕ್ತಿ ಎಂದು ಇವರು ಗುರುತಿಸಿಕೊಂಡಿದ್ದಾರೆ.

78 ವರ್ಷದ  ಬಿಗ್ ಬಿ ಈಗಲೂ ಹಲವಾರು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ನಿರ್ದೇಶಕ ವಿಕಾಸ್ ಬಹ್ಲ್ ಅವರ ಸಿನಿಮಾದಲ್ಲಿ ತಂದೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಹಿಂದಿಯ ‘ಕೌನ್ ಬನೇಗಾ ಕರೋಡ್ ಪತಿ’  ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.