“ಸೈ ರಾ ನರಸಿಂಹ ರೆಡ್ಡಿ” ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ವಾರಿಯರ್!
Team Udayavani, May 31, 2019, 12:20 PM IST
ಹೈದರಾಬಾದ್:ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಸೈ ರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಈಗಾಗಲೇ ಸುದ್ದಿಯಾಗಿದೆ. ಆದರೆ ಇದೀಗ ಸಿನಿ ಮೂಲಗಳ ಪ್ರಕಾರ ಸೈ ರಾದಲ್ಲಿ ಅನುಷ್ಕಾ ವೀರ ಯೋಧೆಯಾಗಿ
ಕಾಣಿಸಿಕೊಳ್ಳಲಿದ್ದಾಳಂತೆ.
ಆಂಧ್ರಪ್ರದೇಶದ ಉಯ್ಯಾಲಾವಾಡ ನರಸಿಂಹ ರೆಡ್ಡಿ ಜೀವನ ಚರಿತ್ರೆ ಆಧಾರಿತ ಸಿನಿಮಾ ಇದಾಗಿದೆ. ರೆಡ್ಡಿ ಆಂಧ್ರಪ್ರದೇಶದ ಮೊತ್ತ ಮೊದಲ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.
ಸೈ ರಾ ನರಸಿಂಹ ರೆಡ್ಡಿ ಸಿನಿಮಾ ಸೆಟ್ಟೆರುತ್ತಿದ್ದಂತೆಯೇ ಸಾಕಷ್ಟು ಕುತೂಹಲಕಾರಿ ಅಂಶಗಳು ಹರಿದಾಡತೊಡಗಿದ್ದವು. ಇದೀಗ ಹೊಸ ಬೆಳವಣಿಗೆಯಲ್ಲಿ ಅನುಷ್ಕಾ ಶೆಟ್ಟಿ ಪಾತ್ರದ ಬಗ್ಗೆಯೇ ಚರ್ಚೆಯಾಗುತ್ತಿದೆ. ಸೈ ರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ತನ್ನ ಪಾತ್ರ ಏನೆಂಬ ಗುಟ್ಟನ್ನು ಅನುಷ್ಕಾ ಈವರೆಗೂ ಬಿಟ್ಟುಕೊಟ್ಟಿಲ್ಲ! ವರದಿಗಳ ಪ್ರಕಾರ ಸೈ ರಾ ಸಿನಿಮಾದಲ್ಲಿ ಅನುಷ್ಕಾ ಪಾತ್ರ ಕ್ಲಿಷ್ಷಕರವಾದದ್ದು ಎಂದೇ ಹೇಳಲಾಗುತ್ತಿದೆ.
ಅನುಷ್ಕಾ ಶೆಟ್ಟಿಯನ್ನು ಸೈ ರಾದಲ್ಲಿ ವಾರಿಯರ್ ಆಗಿ ತೋರಿಸಲಾಗುತ್ತದೆ ಎಂದು ನಿರ್ದೇಶಕ ಸುರೇಂದ್ರ ರೆಡ್ಡಿ ಹೇಳಿದ್ದಾರೆ. ಯುದ್ಧ ಭೂಮಿಯಲ್ಲಿ ಬ್ರಿಟಿಷ್ ಪಡೆಗಳ ಜೊತೆ ಖಡ್ಗವನ್ನು ಝಳಪಿಳಿಸುತ್ತ ಹೋರಾಡುತ್ತಿರುವ ದೃಶ್ಯ ಕಾಣಬಹುದಾಗಿದೆಯಂತೆ. ಸದ್ಯ ಅನುಷ್ಕಾ ಅಮೇರಿಕಾದಲ್ಲಿ ಸೈಲೆನ್ಸ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್