Bade Miyan Chote Miyan ಟ್ರೇಲರ್ನಲ್ಲಿ ಅಕ್ಷಯ್-ಟೈಗರ್ ಅಬ್ಬರ
Team Udayavani, Mar 31, 2024, 2:07 PM IST
ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ಬಡೆ ಮಿಯಾನ್ ಚೋಟೆ ಮಿಯಾನ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಟ್ರೇಲರ್ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆ್ಯಕ್ಷನ್ ಮೂಲಕ ಅಬ್ಬರಿಸಿದ್ದಾರೆ.
ಬಡೆ ಮಿಯಾನ್ ಚೋಟೆ ಮಿಯಾನ್ ಟ್ರೇಲರ್ನಲ್ಲಿ ಮೈ ಜುಮ್ ಎನಿಸುವ ಹೈ ಆ್ಯಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಬಿಗ್ ಬಜೆಟ್ನಲ್ಲಿ “ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಟಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರ ಏಪ್ರಿಲ್ನಲ್ಲಿ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ