ಒಟಿಟಿ ವಿರುದ್ಧ ಗುಡುಗಿದ ಬಾಲಿವುಡ್ ನಟ ಜಾನ್ ಅಬ್ರಾಹಂ  

Team Udayavani, Mar 17, 2021, 6:15 PM IST

jonh

ಮುಂಬೈ : ದೊಡ್ಡ ಪರದೆಯಲ್ಲಿ ಸಿನಿಮಾ ಸೋಲಿನಿಂದ ಉಂಟಾಗುವ ಮುಜುಗರ ತಪ್ಪಿಸಿಕೊಳ್ಳಲು ಕೆಲವು ನಟರಿಗೆ ಒಟಿಟಿ ಒಳ್ಳೆಯ ಆಯ್ಕೆಯಾಗಿದೆ ಎಂದು ಬಾಲಿವುಟ್ ನಟ ಜಾನ್ ಅಬ್ರಾಹಾಂ ಹೇಳಿದ್ದಾರೆ.

ಇತ್ತೀಚಿಗೆ ಮಾಧ್ಯಮವೊಂದರಲ್ಲಿ ನೀಡಿರುವ ಸಂದರ್ಶನದಲ್ಲಿ ಒಟಿಟಿ ವಿರುದ್ಧ ಹರಿಹಾಯ್ದಿರುವ ಅವರು, ಚಿತ್ರರಂಗಕ್ಕೆ ಬಿಗ್ ಸ್ಕ್ರೀನ್‍ ಗಳ ಅಗತ್ಯತೆ ಎಷ್ಟು ಎಂಬುದನ್ನ ಒತ್ತಿ ಹೇಳಿದ್ದಾರೆ. ಕೋವಿಡ್ ಪಿಡುಗು ನಂತರ ತೆರೆದುಕೊಳ್ಳುತ್ತಿರುವ ಚಿತ್ರಮಂದಿರಗಳತ್ತ ಸಿನಿಮಾ ಪ್ರೇಕ್ಷಕರು ಆಗಮಿಸಬೇಕು. ಆದ್ದರಿಂದ ದೊಡ್ಡ ಸ್ಕ್ರೀನ್‍ಗಳಲ್ಲಿ ಸಿನಿಮಾ ಬಿಡುಗಡೆ ಮಾಡಬೇಕು. ಇದರಿಂದ ಸಿನಿಮಾ ನಿರ್ಮಾಪಕರು ಹಾಗೂ ಚಿತ್ರಮಂದರಿಗಳ ಮಾಲೀಕರಲ್ಲಿ ಆತ್ಮಸ್ಥೈರ್ಯ ತುಂಬಿದಂತಾಗುತ್ತದೆ ಎಂದಿದ್ದಾರೆ.

ಸಿನಿ ಪ್ರೇಮಿಗಳನ್ನ ರಂಜಿಸಲೆಂದೇ ನಾನು ಇಲ್ಲಿದ್ದೇನೆ. ಚಿತ್ರಮಂದಿರಗಳ ಮೂಲಕ  ನನ್ನ ಸಿನಿಮಾ ತಲುಪುದು ನನಗೆ ಹೆಚ್ಚು ಖುಷಿ ಕೊಡುತ್ತದೆ. ಒಳ್ಳೆಯ ಸಿನಿಮಾಗಳನ್ನು ಮಾಡಲು ನಾನು ಇಷ್ಟಪಡುತ್ತೇನೆ. ಸಿನಿಮಾಗಳ ಸೋಲು ಗೆಲುವು ನನಗೆ ಮುಖ್ಯವಲ್ಲ ಎಂದಿದ್ದಾರೆ ಅಬ್ರಾಹಂ.

ಸಿನಿಮಾಗಳು ಹೆಚ್ಚು ಜನರನ್ನು ತಲುಪುವುದರಲ್ಲಿ ನಾನು ಯಶಸ್ಸು ಕಾಣುತ್ತೇನೆ. ಪ್ರೇಕ್ಷಕರು ದೊಡ್ಡ ಸ್ಕ್ರೀನ್‍ಗಳಲ್ಲಿ ಸಿನಿಮಾ ನೋಡಿ ಸಂಭ್ರಮಿಸಬೇಕು, ಖುಷಿ ಪಡಬೇಕು ಎಂಬುದು ನನ್ನ ಬಯಕೆ. ಇತ್ತೀಚಿಗೆ ನಾವು ಬೆಳ್ಳಿ ಪರದೆಯ ಪ್ರಾಮುಖ್ಯತೆಯನ್ನು ಕಳೆದುಕೊಂಡಿದ್ದೇವೆ. ನನ್ನ ಮುಂಬೈ ಸಾಗಾ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಮೂಲಕ ದೊಡ್ಡ ಪರದೆಗಳ ಗತವೈಭವ ಮರಳಿ ಬರುವಂತೆ ಮಾಡುತ್ತೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವೊಂದು ನಟರು ದೊಡ್ಡ ಸ್ಕ್ರೀನ್‍ಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಅವರಲ್ಲಿರುವ ಭಯ. ದೊಡ್ಡ ಪರದೆಯಲ್ಲಿ ಸಿನಿಮಾಗಳು ಸೋಲುವುದರಿಂದಾಗುವ ಮುಜುಗರಿಂದ ಪಾರಾಗಲು ಒಟಿಟಿ ವೇದಿಕೆ ಮಾಡಿಕೊಂಡಿದ್ದಾರೆ ಎಂದು ಜಾನ್ ಕಿಡಿ ಕಾರಿದ್ದಾರೆ.

ಇನ್ನು ಜಾನ್ ಅಬ್ರಹಾಂ ಅವರ ‘ಮುಂಬೈ ಸಾಗಾ’ ಈ ವರ್ಷ ತೆರೆ ಕಾಣಲಿದೆ. ಬಹುನಿರೀಕ್ಷೆಯ ಈ ಚಿತ್ರವನ್ನ ದೊಡ್ಡ ಪರದೆಯ ಮೇಲೇ ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.