ಬಾಲಿವುಡ್ ಹಿರಿಯ ನಟ ನಾಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು
Team Udayavani, Jun 30, 2021, 2:32 PM IST
ಬಾಲಿವುಡ್ ನ ಹಿರಿಯ ನಟ ನಾಸೀರುದ್ದೀನ್ ಶಾ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟನಿಗೆ ನ್ಯುಮೋನಿಯಾ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಸೀರುದ್ದೀನ್ ಮ್ಯಾನೇಜರ್, ಎರಡು ದಿನಗಳ ಹಿಂದೆಯೇ ನಾಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನಟನಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಳೆದ ವರ್ಷ ನಾಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ನಂತರ ನಾಸೀರುದ್ಧೀನ್ ಪುತ್ರ ವಿವಾನ್ ಶಾ ಈ ಸುದ್ದಿ ಸುಳ್ಳು ಎಂದು ಹೇಳಿದ್ದರು.
ನಾಸೀರುದ್ದೀನ್ ಶಾ ಅವರ ಸಾಧನೆಯನ್ನು ಮೆಚ್ಚಿ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್