ನಟಿ ನಿಹಾರಿಕಾ ಪತಿ ವಿರುದ್ಧ ದೂರು ದಾಖಲು  

Team Udayavani, Aug 6, 2021, 3:02 PM IST

vfghft

ಹೈದರಾಬಾದ್ :  ಟಾಲಿವುಡ್ ನಟಿ ನಿಹಾರಿಕಾ ಕೊನಿಡೆಲ್ ಅವರು ಪತಿ ಚೈತನ್ಯ  ಅವರಿಗೆ ಇದೀಗ ಕಾನೂನು ಕಂಟಕ ಎದುರಾಗಿದೆ. ಈತನ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಲಿವುಡ್ ನಿರ್ದೇಶಕ ನಾಗಬಾಬು ಪುತ್ರಿ ನಿಹಾರಿಕಾ ಕಳೆದ ವರ್ಷ ಉದ್ಯಮಿ ಚೈತನ್ಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆ ನಂತರ ಈ ದಂಪತಿ ಹೈದರಾಬಾದ್‌ನ ಶೇಕ್‌ಪೇಟೆನಲ್ಲಿರುವ ಟೆನ್‌ಸಿನಾ ಅಪಾರ್ಟ್‌ಮೆಂಟ್‌ನಲ್ಲಿ ಚೈತನ್ಯ ಒಂದು ಫ್ಲಾಟ್ ಖರೀದಿಸಿ ವಾಸವಾಗಿದ್ದಾರೆ. ಇದೀಗ ಈ ಫ್ಲಾಟ್ ನವರು ಈತನ ವಿರುದ್ಧ ದೂರು ನೀಡಿದ್ದಾರೆ.

ಕಾರಣವೇನು ?

ಚೈತನ್ಯ ಅವರು ಫ್ಲಾಟ್ ಗೆ ಜಾಸ್ತಿ ಜನರು ಬರುತ್ತಾರೆ. ಇವರಿಂದ ನಮಗೆ ಕಿರಿಕಿರಿಯುಂಟಾಗುತ್ತಿದೆ ಎಂದು ನೆರೆ ಹೊರೆಯ ಫ್ಲಾಟ್ ವಾಸಿಗಳು ದೂರಿದ್ದಾರೆ. ಇದೇ ವಿಚಾರಕ್ಕೆ ನಿನ್ನೆ(ಗುರುವಾರ) ಮಧ್ಯರಾತ್ರಿ ಅಪಾರ್ಟ್‌ಮೆಂಟ್‌ನಲ್ಲಿ ಗಲಾಟೆ ಕೂಡ ನಡೆದಿದೆ.

ಇನ್ನು ನೆರೆಹೊರೆಯ ನಿವಾಸಿಗಳ ವಿರುದ್ಧ ಚೈತನ್ಯ ಕೂಡ ಪ್ರತಿ ದೂರು ನೀಡಿದ್ದಾರೆ. ‘ನಿನ್ನೆ ರಾತ್ರಿ ಅಪಾರ್ಟ್‌ಮೆಂಟ್ ನಿವಾಸಿಗಳು ಕೆಲವರು ನನ್ನ ಫ್ಲ್ಯಾಟ್‌ಗೆ ಬಂದು ಜೋರಾಗಿ ಬಾಗಿಲು ತಟ್ಟಿ ಗಲಾಟೆ ಮಾಡಿದ್ದಾರೆ. ನಾನು ಬಾಗಿಲು ತೆರೆಯಯುವ ಮೊದಲು ಪೊಲೀಸರಿಗೆ ವಿಷಯ ತಿಳಿಸಿದೆ. ನಂತರ ಅಪಾರ್ಟ್‌ಮೆಂಟ್ ಮಾಲೀಕರಿಗೆ ವಿಷಯ ತಿಳಿಸಿ ಅವರನ್ನು ಸ್ಥಳಕ್ಕೆ ಬರಲು ಹೇಳಿದೆ. ರಾತ್ರೋರಾತ್ರಿ ನನ್ನ ಫ್ಲಾಟ್‌ಗೆ ನುಗ್ಗಿ ಸುಮಾರು 20 ಮಂದಿ ಅಪಾರ್ಟ್‌ಮೆಂಟ್‌ ನಿವಾಸಿಗಳು ನನ್ನ ವಿರುದ್ಧ ಜಗಳ ಶುರು ಮಾಡಿದ್ದಾರೆ. ನಾನು ವಾಣಿಜ್ಯ ಉದ್ದೇಶಕ್ಕೆ ಕಚೇರಿ ತೆರೆದಿದ್ದೆ. ಅದೇ ಉದ್ದೇಶಕ್ಕಾಗಿ ಅಲ್ಲಿ ಫ್ಲ್ಯಾಟ್ ಖರೀದಿಸಿದ್ದೆ. ಆದರೆ ನಾನು ಅಲ್ಲಿ ಕಚೇರಿ ಮಾಡಬಾರದು, ಅಪಾರ್ಟ್‌ಮೆಂಟ್ ಬಿಟ್ಟು ಹೋಗಬೇಕು ಎಂದು ಒತ್ತಾಯಿಸಿದರು.

ನನ್ನ ಫ್ಲ್ಯಾಟ್ ಒಳಗೆ ಗಲಾಟೆ ಮಾಡಿರುವ ಸಿಸಿಟಿವಿ ದೃಶ್ಯಗಳನ್ನು ಬಂಜಾರ ಹಿಲ್ಸ್ ಪೊಲೀಸರಿಗೆ ನಾನು ನೀಡಿರುವೆ,’ ಎಂದು ಚೈತನ್ಯ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ವಾಣಿಜ್ಯ ಉದ್ದೇಶಕ್ಕೆ ನಾನು ಫ್ಲ್ಯಾಟ್ ಖರೀದಿ ಮಾಡಿರುವುದು ಎಂದು ಮಾಲೀಕರಿಗೆ ತಿಳಿಸಿರಲಿಲ್ಲ. ಇದು ನನ್ನ ತಪ್ಪು ಎಂದು ಒಪ್ಪಿಕೊಂಡಿರುವ ಚೈತನ್ಯ ಆಗಸ್ಟ್‌ 10ರಂದು ಅಪಾರ್ಟ್‌ಮೆಂಟ್ ಖಾಲಿ ಮಾಡುವುದಾಗಿಯೂ ತಿಳಿಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.