ನಟ ಅಜಿತ್ ಮನೆ ಎದುರು ಬೆಂಕಿ ಹಚ್ಚಿಕೊಂಡ ಮಹಿಳೆ
Team Udayavani, Oct 5, 2021, 7:52 PM IST
ಚೆನ್ನೈ: ಕಾಲಿವುಡ್ ನಟ ಅಜಿತ್ ಮನೆ ಮುಂದೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ಫರ್ಜಾನಾ ಎಂಬ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
2020ರಲ್ಲಿ ಅಜಿತ್ ಹಾಗೂ ಅವರ ಪತ್ನಿ ಶಾಲಿನಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಈಕೆ ಅಜಿತ್ ದಂಪತಿಯ ವಿಡಿಯೋ ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಆಸ್ಪತ್ರೆ ನಿಯಮಾವಳಿಯ ಅನುಸಾರ ಫರ್ಜಾನಾರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇದಾದ ಬಳಿಕ ಶಾಲಿನಿಯನ್ನು ಸಂಪರ್ಕಿಸಿದ್ದ ಫರ್ಜಾನಾ ತಮ್ಮ ಕೆಲಸ ವಾಪಸ್ ಸಿಗುವಂತೆ ಮಾಡಿ ಎಂದು ಕೇಳಲು ಯತ್ನಿಸಿದರೂ ಅದು ಪ್ರಯೋಜನವಾಗಿರಲಿಲ್ಲ.
ಮತ್ತೊಬ್ಬ ಮಹಿಳೆಯ ಜೊತೆ ಅಜಿತ್ ನಿವಾಸಕ್ಕೆ ಆಗಮಿಸಿದ ಫರ್ಜಾನಾ ಅಜಿತ್ ಕುಮಾರ್ ನಿವಾಸದ ಎದುರು ನಿಮ್ಮಿಂದಾಗಿ ನನ್ನ ಕೆಲಸ ಹೋಯ್ತು ಎಂದು ಕಿರಿಚಿದ್ದಾಳೆ. ಬಳಿಕ ನಟ ಅಜಿತ್ ಕುಮಾರ್ ನಿವಾಸದ ಎದುರೇ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್