ಬಾಲಿವುಡ್ ನಟಿ ದಿಶಾ ಪಟಾನಿ ತಂದೆಗೂ ಕೋವಿಡ್ ಪಾಸಿಟಿವ್
Team Udayavani, Aug 6, 2020, 12:59 PM IST
ಮುಂಬೈ: ಬಾಲಿವುಡ್ ನಟಿ ದಿಶಾ ಪಟಾನಿ ಅವರ ತಂದೆ ಸೇರಿದಂತೆ ಉತ್ತರ ಪ್ರದೇಶ ವಿದ್ಯುತ್ ಇಲಾಖೆಯ ತುರ್ತು ಘಟಕದ ಮೂವರು ಅಧಿಕಾರಿಗಳಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ.
ಲಕ್ನೋದಿಂದ ಉತ್ತರಪ್ರದೇಶಕ್ಕೆ ಬಂದ ಜಗದೀಶ್ ಪಟಾನಿ ಮತ್ತು ಇತರ ಇಬ್ಬರು ಅಧಿಕಾರಿಗಳಿಗೆ ಕೋವಿಡ್ -19 ಸೊಂಕು ದೃಢಪಟ್ಟಿದೆ ಎಂದು ಹೆಚ್ಚುವರಿ ಸಿಎಂಒ ಅಶೋಕ್ ಕುಮಾರ್ ಬುಧವಾರ ತಿಳಿಸಿದ್ದಾರೆ.
ದಿಶಾ ಪಟಾನಿಯವರ ತಂದೆ ಉತ್ತರಪ್ರದೇಶ ವಿದ್ಯುತ್ ಇಲಾಖೆಯ ತುರ್ತು ಘಟಕದ ಅಧಿಕಾರಿಯಾಗಿದ್ದು ಪ್ರಮುಖ ಹಗರಣವೊಂದರ ತನಿಖೆ ನಡೆಸುತ್ತಿದ್ದಾರೆ. ಇದೀಗ ಇವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು ತಮ್ಮ ಮನೆಗೆ ತೆರಳಿಲ್ಲ ಎನ್ನಲಾಗಿದೆ.
ಸದ್ಯ ಬಾಲಿವುಡ್ ನಟಿ ದಿಶಾ ಪಟಾಣಿ ಲಾಕ್ಡೌನ್ ಸಂದರ್ಭದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಒಂದು ಕಡೆ ಫಿಟ್ನೆಸ್ಗಾಗಿ ಸಖತ್ ವರ್ಕ್ಔಟ್ ಮಾಡುವುದಲ್ಲದೆ ಕಿಕ್ ಬಾಕ್ಸಿಂಗ್ ಕೂಡ ಕಲಿಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್ ಮಾಡುತ್ತಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್