ಜಾಕ್ವೆಲಿನ್ ಫರ್ನಾಂಡಿಸ್ ಗೆ ಅಬುಧಾಬಿಗೆ ತೆರಳಲು ಕೋರ್ಟ್ ಅನುಮತಿ
Team Udayavani, May 28, 2022, 8:42 PM IST
ಮುಂಬಯಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ಅವರಿಗೆ ಐಐಎಫ್‌ಎ ಪ್ರಶಸ್ತಿಗಾಗಿ ಅಬುಧಾಬಿಗೆ ತೆರಳಲು ಕೋರ್ಟ್ ಅನುಮತಿ ನೀಡಿದೆ.
200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಎದುರಿಸುತ್ತಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರು ಅಬುಧಾಬಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (IIFA ) ಕಾರ್ಯಕ್ರಮಕ್ಕಾಗಿ 15 ದಿನಗಳ ಕಾಲ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿದ್ದರು. ನ್ಯಾಯಾಲಯ ಮೇ 31 ರಿಂದ ಜೂನ್ 6 ರ ನಡುವೆ ಅಬುಧಾಬಿಗೆ ಪ್ರಯಾಣಿಸಲು ಅನುಮತಿಯನ್ನು ಪಡೆದಿದ್ದಾರೆ.
ಕಳೆದ ತಿಂಗಳು ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಮೂಲಗಳ ಪ್ರಕಾರ, 7.27 ಕೋಟಿ ಮೌಲ್ಯದ ಸ್ಥಿರ ಠೇವಣಿ ಮೌಲ್ಯದ ವಸ್ತುಗಳು ಮತ್ತು ಆಸ್ತಿಯನ್ನು ಏಜೆನ್ಸಿಯು ಜಪ್ತಿ ಮಾಡಿತ್ತು.
ಕಾನ್ಮನ್ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ನಿರಂತರವಾಗಿ ಕೇಳಿಬರುತ್ತಿದ್ದು, ಜಾಕ್ವೆಲಿನ್ ಪ್ರಸ್ತುತ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ ಮತ್ತು ಅವರ ಸಾಕ್ಷ್ಯವನ್ನು ಸಹ ದಾಖಲಿಸಿದ್ದಾರೆ. ಅಗತ್ಯವಿದ್ದಾಗ ತನಿಖೆಗೆ ಲಭ್ಯವಿರಬೇಕು ಮತ್ತು ದೇಶದಿಂದ ಹೊರಗೆ ಹಾರಬಾರದು ಎಂದು ಆಕೆಗೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ಮೇ ತಿಂಗಳಲ್ಲಿ19 ಲಕ್ಷ ವಾಟ್ಸ್ಆ್ಯಪ್ ಖಾತೆ ಬ್ಯಾನ್
ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಹೈಕೋರ್ಟ್ ನೋಟಿಸ್
ಜಗನ್ನಾಥ ರಥಯಾತ್ರೆ ಈಗ ಅಬಾಧಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಗುತ್ತಿಗೆ ಪೌರಕಾರ್ಮಿಕರ ಖಾಯಂಗೆ ಒಪ್ಪಿಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ?