ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ: ಆರ್ಥಿಕ ಸಂಕಷ್ಟ ಹೇಳಿಕೊಂಡ ನಟಿ ಕಂಗನಾ


Team Udayavani, Jun 10, 2021, 1:40 PM IST

65

ಮುಂಬೈ:  ಲಾಕ್ ಡೌನ್ ನಿಂದಾಗಿ ದೇಶದ ಸಾಕಷ್ಟು ಜನರು ತೊಂದರೆಗೆ ಸಿಲುಕಿದರು. ದುಡಿಯಲು ಕೆಲಸ ಇಲ್ಲದೆ ಆರ್ಥಿಕ ಬಿಕ್ಕಟ್ಟು ಎದುರಿಸಿದರು. ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಹ ದುಸ್ಥಿತಿಗೆ ಬಂದು ತಲುಪಿದರು. ಈ ಲಾಕ್ ಡೌನ್ ಬಿಸಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೂ ತಟ್ಟಿದೆ.

ಹೌದು, ಕಳೆದ ವರ್ಷದಿಂದ ದುಡಿಮೆ ಇಲ್ಲ, ಹೀಗಾಗಿ ನನಗೆ ತೆರಿಗೆ ಕಟ್ಟಲು ಸಾಧ್ಯವಾಗಿಲ್ಲ ಎಂದು ಬಿಟೌನ್ ಬೋಲ್ಡ್ ಬೆಡಗಿ ಕಂಗನಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಒಂದು ಸಿನಿಮಾಗೆ ಏನಿಲ್ಲ ಅಂದರೂ ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿದ್ದರೂ ಕಂಗನಾ ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಪಾವತಿ ಮಾಡಿದ್ದು, ಈ ಬಾರಿ ನನಗೆ ತೆರಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ನಟಿ ಕಂಗನಾ ರಣಾವತ್‍ರವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ, ನನ್ನ ಒಟ್ಟು ಆದಾಯದಲ್ಲಿ ಶೇ. 45ರಷ್ಟು ತೆರಿಗೆ ಪಾವತಿಸುತ್ತೇನೆ. ನಾನು ಅತೀ ಹೆಚ್ಚು ತೆರಿಗೆ ಪಾವತಿಸುವ ನಟಿಯಾಗಿದ್ದೇನೆ. ಆದರೆ ಕೆಲಸ ಇಲ್ಲದೆ, ಕಳೆದ ವರ್ಷ ಅರ್ಧದಷ್ಟು ತೆರಿಗೆಯನ್ನು ಪಾವತಿಸಿದ್ದೇನೆ. ಇದೀಗ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿದ್ದು, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಎಂದಿದ್ದಾರೆ.

ನಾನು ತೆರಿಗೆ ಪಾವತಿಸುವುದು ತಡ ಮಾಡಿದರೆ ಸರ್ಕಾರ ನನಗೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮ್ಮೆಲ್ಲರಿಗೂ ಕಠಿಣವಾಗಿರಬಹುದು. ಆದರೆ ಎಲ್ಲರೂ ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.