ಲೈಂಗಿಕಾಸಕ್ತಿ ಕಡಿಮೆಯಾದಾಗ ಸೈಫ್ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ರಿವೀಲ್ ಮಾಡಿದ ಕರೀನಾ
Team Udayavani, Aug 10, 2021, 6:57 PM IST
ಮುಂಬೈ: ಬಾಲಿವುಡ್ ನಟಿ ಕರೀನಾ ಕಫೂರ್ ಬರೆದಿರುವ ಪುಸ್ತಕ ನಿನ್ನೆಯಷ್ಟೆ ರಿಲೀಸ್ ಆಯಿತು. ವರ್ಚುಯಲ್ ಆಗಿ ನಡೆದ ಪುಸ್ತಕ ಬಿಡುಗಡೆಯ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಕರೀನಾ, ಗರ್ಭಿಣಿಯಾದ ಸಂದರ್ಭದಲ್ಲಿ ತಾನು ಅನುಭವಿಸಿದ ಕಷ್ಟ, ಸಂತೋಷದ ಕುರಿತು ಮಾತನಾಡಿದರು.
ಮಹಿಳೆ ಗರ್ಭಿಣಿಯಾದ ಸಂದರ್ಭದಲ್ಲಿ ಆಕೆಯ ಪರಿಸ್ಥಿತಿ ಬಹುತೇಕ ಮಂದಿಗೆ ಅರ್ಥ ಆಗುವುದೇ ಇಲ್ಲ. ಆಕೆಯ ತಳಮಳ, ಭಾವನೆಗಳು, ಮಾನಸಿಕ ಉದ್ವೇಗ, ಮೂಡ್ ಕ್ಷಣದಿಂದ ಕ್ಷಣಕ್ಕೆ ಬದಲಾಗುತ್ತಲೇ ಇರುತ್ತವೆ. ಇಂಥಾ ಸಂದರ್ಭದಲ್ಲಿ ಆಕೆಯ ಜೊತೆ ಇರುವ ಪತಿ ಇದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ ಕರೀನಾ.
ನಾನು ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆ ಮೇಲಿನ ಆಸಕ್ತಿ ಕಡಿಮೆ ಆಯಿತು. ಇದನ್ನು ಪತಿ ಸೈಫ್ ಮುಂದೆ ಹೇಳಿಕೊಂಡೆ. ಆತನೂ ನನ್ನ ಫೀಲಿಂಗ್ಸ್ ಅರ್ಥ ಮಾಡಿಕೊಂಡು ತುಂಬಾ ಚೆನ್ನಾಗಿ ಹೊಂದಿಕೊಂಡರು ಎಂದು ಸೈಫ್ ಬಗ್ಗೆ ಮೆಚ್ಚುಗೆ ಮಾತನ್ನಾಡಿದ್ದಾರೆ.
ದೈನಂದಿನ ಬದುಕಿನಲ್ಲಿ ದಂಪತಿ ನಡುವೆ ಸೆಕ್ಸ್ ಬಾಂಧವ್ಯದ ಕೊಂಡಿಯಾಗಿ ಬೆಸೆಯುತ್ತದೆ ನಿಜ. ಆದರೆ ಅದು ಇಬ್ಬರೂ ಸಂಗಾತಿಗಳ ಮನಸ್ಥಿತಿಯನ್ನು ಅವಲಂಬಿಸಿರುತ್ತದೆ. ಯಾರೇ ಒಬ್ಬ ಸಂಗಾತಿಗೆ ಆ ಕ್ಷಣದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ಆಸಕ್ತಿ ಇಲ್ಲದೇ ಹೋದಲ್ಲಿ ಮತ್ತೊಬ್ಬರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ದಾಂಪತ್ಯ ಅರ್ಥ ಪೂರ್ಣ ಎಂದು ಕರೀನ ಅಭಿಪ್ರಾಯ ಪಟ್ಟಿದ್ದಾರೆ.
ಇನ್ನು ತಾವು ಬರೆದ ಪುಸ್ತಕದಲ್ಲಿ ಸಾಕಷ್ಟು ವಿಚಾರಗಳನ್ನು ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್