ಬಾಲಿವುಡ್ ಜೋಡಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ಗೆ ಜೀವ ಬೆದರಿಕೆ: ಪ್ರಕರಣ ದಾಖಲು
ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ
Team Udayavani, Jul 25, 2022, 1:34 PM IST
ಮುಂಬೈ: ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಹಾಕಲಾಗಿದ್ದು, ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಕತ್ರಿನಾ ಮತ್ತು ವಿಕ್ಕಿ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದಂದು ಮಾಲ್ಡೀವ್ಸ್ನಲ್ಲಿ ಸಮಯ ಕಳೆದಿದ್ದು, ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಕುರಿತು ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ಬೆದರಿಕೆಗಳು ಏನೆಂದು ತಿಳಿದುಬಂದಿಲ್ಲ. ಈ ಕುರಿತು ವಿಕ್ಕಿ ಕೌಶಲ್ ಅವರ ದೂರಿನ ಮೇರೆಗೆ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ.
ಅಪರಿಚಿತ ವ್ಯಕ್ತಿಯೊಬ್ಬ ಇನ್ಸ್ಟಾಗ್ರಾಮ್ನಲ್ಲಿ ತನ್ನ ಹೆಂಡತಿಯನ್ನು ಹಿಂಬಾಲಿಸುತ್ತಿದ್ದು, ಅವಳಿಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: “ನೀನು ಬಗೆಹರಿಯದ ಹಾಡು…’; ಗಾಳಿಪಟ-2 ಚಿತ್ರ ಮತ್ತೊಂದು ಹಾಡು ಬಂತು
ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೂ ಪತ್ರದ ರೂಪದಲ್ಲಿ ಬೆದರಿಕೆಗಳು ಬಂದಿದ್ದವು. ಘಟನೆಯ ನಂತರ ಸಲ್ಮಾನ್ ಮತ್ತು ಅವರ ಕುಟುಂಬಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ವ್ಯಕ್ತಿಗಳಿಂದ ಹಣ ಸುಲಿಗೆ ಮಾಡಲು ಈ ಕೃತ್ಯವನ್ನು ಎಸಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA