ಐಷಾರಾಮಿ ಕಾರು ಖರೀದಿಸಿದ ನಟಿ ಕೃತಿ ಸನೋನ್
Team Udayavani, Sep 12, 2021, 3:30 PM IST
ಮುಂಬೈ : ‘ಮಿಮಿ’ ಸಿನಿಮಾ ಗೆಲುವಿನ ಖುಷಿಯಲ್ಲಿ ಬಾಲಿವುಡ್ ನಟಿ ಕೃತಿ ಸನೋನ್ ಇದೀಗ ಐಷಾರಾಮಿ ಕಾರು ಖರೀದಿಸಿದ್ದಾರೆ.
2.43 ಕೋಟಿ ರೂ. ಮೌಲ್ಯದ ‘ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎ 600’ ಕಾರು ಕೃತಿ ಸನೋನ್ ಮನೆಯಂಗಳಕ್ಕೆ ಬಂದು ನಿಂತಿದೆ.
ಕೋಟಿಗಟ್ಟಲೆ ಸಂಭಾವನೆ ಪಡೆಯುವ ಕೆಲವೇ ಕೆಲವು ತಾರೆಯರು ಈ ಕಾರು ಒಡೆಯರಾಗಿದ್ದಾರೆ. ರಣವೀರ್ ಸಿಂಗ್, ಅರ್ಜುನ್ ಕಪೂರ್ ಅವರು ‘ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎ 600’ ಖರೀದಿಸಿದ್ದರು. ಈಗ ಅವರ ಸಾಲಿಗೆ ಕೃತಿ ಕೂಡ ಸೇರ್ಪಡೆ ಆಗಿದ್ದಾರೆ.
‘ಮಿಮಿ’ ಚಿತ್ರದ ಯಶಸ್ಸಿನಿಂದ ಕೃತಿಗೆ ತುಂಬ ಖುಷಿ ಆಯಿತು. ಹಾಗಾಗಿ ಏನಾದರೂ ಅಮೂಲ್ಯವಾದದ್ದನ್ನು ಖರೀದಿಸಲು ಅವರು ನಿರ್ಧರಿಸಿದರು. ಈ ಕಾರು ಕೊಂಡುಕೊಳ್ಳಬೇಕು ಎಂಬುದು ಅವರ ಬಹುದಿನಗಳ ಕನಸಾಗಿತ್ತು. ಅದೀಗ ನನಸಾಗಿದೆ’ ಎಂದು ಅವರ ಆಪ್ತರು ಹೇಳಿದ್ದಾರೆ.
ಇನ್ನು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದ್ದ ‘ಮಿಮಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಸದ್ಯ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟಿಸುತ್ತಿರುವ ‘ಆದಿಪುರುಷ್’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ. ಅಕ್ಷಯ್ ಕುಮಾರ್ ನಾಯಕತ್ವದ ‘ಬಚ್ಚನ್ ಪಾಂಡೆ’, ‘ಗಣಪತ್’, ‘ಹಮ್ ದೋ ಹಮಾರೇ ದೋ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ