ಆದಿಪುರುಷನಿಗೆ ಜೊತೆಯಾಗಲಿದ್ದಾರಂತೆ ಕೃತಿ ಸನನ್
Team Udayavani, Nov 28, 2020, 6:29 PM IST
ನವದೆಹಲಿ: ಖ್ಯಾತ ಬಾಲಿವುಡ್ ನಿರ್ದೇಶಕ ಓಂ ರಾವತ್ ಹಾಗೂ ಬಾಹುಬಲಿ ಖ್ಯಾತಿಯ ಪ್ರಭಾಸ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಆದಿಪುರುಷ್ ಚಿತ್ರಕ್ಕೆ ನಾಯಕಿಯಾಗಿ ನಟಿ ಕೃತಿ ಕೃತಿ ಸನನ್ ಅವರನ್ನು ಚಿತ್ರತಂಡ ಆಯ್ಕೆಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಕೆಲದಿನಗಳ ಹಿಂದೆಯಷ್ಟೇ ಚಿತ್ರತಂಡ ಆದಿಪುರುಷ್ ಸಿನಿಮಾದ ಪೋಸ್ಟರ್ ಮತ್ತು ಮೋಷನ್ ಪಿಕ್ಚರ್ ಬಿಡುಗಡೆಗೊಳಿಸಿದ್ದು, ನಟ ಪ್ರಭಾಸ್, ರಾಮನ ಪಾತ್ರಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಚಿತ್ರತಂಡ ಖಚಿತಪಡಿಸಿತ್ತು.
ರಾಮನ ಪಾತ್ರಧಾರಿಗೆ ಜೋಡಿಯಾಗಿ ಯಾರು ನಟಿಸುತ್ತಾರೆ ಎಂಬುದನ್ನು ಚಿತ್ರ ತಂಡ ತಿಳಿಸಿರಲಿಲ್ಲ. ಆದರೆ ಈ ಪಾತ್ರಕ್ಕಾಗಿ ನಟಿ ಕೃತಿ ಸನನ್ ಅವರು ಆಯ್ಕೆಯಾಗಲಿದ್ದಾರೆ ಎಂದು ಮುಂಬೈ ಮಿರರ್ ವರದಿ ಮಾಡಿದೆ, ಈ ಕುರಿತಾಗಿ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ಈ ಹಿಂದೆ ಆದಿಪುರುಷ್ ಚಿತ್ರಕ್ಕೆ ನಾಯಕಿಯಾಗಿ ಅನುಷ್ಕಾ ಶೆಟ್ಟಿ, ಅನುಷ್ಕಾ ಶರ್ಮಾ, ಕಿಯಾರಾ ಅಡ್ವಾಣಿ ಮತ್ತು ಕೀರ್ತಿ ಸುರೇಶ್ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡಿತ್ತು , ಆದರೆ ಚಿತ್ರತಂಡ ಇದೀಗ ಕೃತಿ ಕೃತಿ ಸನನ್ ಆಯ್ಕೆ ಮಾಡುವ ವಿಚಾರ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444