ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ
Team Udayavani, Jan 27, 2022, 11:00 PM IST
ಮುಂಬೈ: ಕೊರೊನಾ ಸೋಂಕಿಗೆ ತುತ್ತಾಗಿ, ಕೆಲ ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್(92) ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಲತಾ ಅವರಿಗೆ ಅಳವಡಿಸಲಾಗಿರುವ ವೆಂಟಿಲೇಟರ್ ಅನ್ನು ಗುರುವಾರ ಬೆಳಗ್ಗೆ ಪ್ರಾಯೋಗಿಕವಾಗಿ ತೆಗೆಯಲಾಗಿತ್ತು. ಆರೋಗ್ಯದಲ್ಲಿ ಕೊಂಚ ಪ್ರಗತಿ ಕಂಡುಬಂದಿದೆ. ಡಾ. ಸಾಮ್ದಾನಿ ಅವರ ತಂಡ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದು ಲತಾ ಅವರ ಕುಟುಂಬ ತಿಳಿಸಿದೆ.
ಅವರ ಆರೋಗ್ಯದ ಬಗ್ಗೆ ಯಾವುದೇ ಸುಳ್ಳು ಸುದ್ದಿ ಹರಡದಿರಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.