ಬಾಲಿವುಡ್ ನಟಿ ಸಾಯಿರಾ ಬಾನುಗೆ ಐಸಿಯುನಲ್ಲಿ ಚಿಕಿತ್ಸೆ
Team Udayavani, Sep 1, 2021, 9:00 PM IST
ಮುಂಬೈ: ಇತ್ತೀಚೆಗೆ ನಿಧನರಾದ ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಅವರ ಪತ್ನಿ ಸಾಯಿರಾ ಬಾನು (77) ಅವರಿಗೆ ರಕ್ತದೊತ್ತಡಕ್ಕೆ ಸಂಬಂಧಿಸಿದ ಅನಾರೋಗ್ಯ ಕಾಣಿಸಿಕೊಂಡಿದ್ದು ನಾಲ್ಕು ದಿನಗಳ ಹಿಂದೆ ಅವರನ್ನು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಕ್ತದೊತ್ತಡ ಸಮಸ್ಯೆ ಮುಂದುವರಿದ ಕಾರಣ ಅವರನ್ನು ಬುಧವಾರದಂದು ಐಸಿಯುಗೆ ಸ್ಥಳಾಂತರಿಸಲಾಗಿದೆ.
ಕೆಲವೇ ದಿನಗಳ ಹಿಂದೆ.. ಅಂದ್ರೆ ಜುಲೈ 7 ರಂದು ಸಾಯಿರಾ ಬಾನು ಪತಿ ಬಾಲಿವುಡ್ನ ಹಿರಿಯ ನಟ ದಿಲೀಪ್ ಕುಮಾರ್ ಇಹಲೋಕ ತ್ಯಜಿಸಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಜುಲೈ 7 ರಂದು ಬೆಳಗ್ಗೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಇದನ್ನೂ ಓದಿ:ಪ್ರಚಾರಕ್ಕೆ ರಮೇಶ ಜಾರಕಿಹೊಳಿ ದಿಢೀರ್ ಎಂಟ್ರಿ
98 ವರ್ಷ ವಯಸ್ಸಾಗಿದ್ದ ಹಿರಿಯ ನಟ ದಿಲೀಪ್ ಕುಮಾರ್ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದಿಲೀಪ್ ಕುಮಾರ್ ಅವರಿಗೆ ಸದಾ ಕಾಲ ಬೆನ್ನೆಲುಬಾಗಿ ನಿಂತಿದ್ದವರು ಪತ್ನಿ ಸಾಯಿರಾ ಬಾನು. ಹಾಸಿಗೆ ಹಿಡಿದಿದ್ದ ದಿಲೀಪ್ ಕುಮಾರ್ ಅವರನ್ನು ಅತ್ಯಂತ ಕಾಳಜಿಯಿಂದ ಪತ್ನಿ ಸಾಯಿರಾ ಬಾನು ನೋಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ