ಸಾಮಾಜಿಕ ಜಾಲತಾಣದಲ್ಲಿ ಚಿತ್ರನಟಿಗೆ ಅಶ್ಲೀಲ ಕಮೆಂಟ್; ಆರೋಪಿ ಸೆರೆ
Team Udayavani, Jul 16, 2019, 11:28 AM IST
ಕೋಲ್ಕತಾ: ಬಂಗಾಲಿ ಚಿತ್ರನಟಿ ವಿರುದ್ಧ ಅಶ್ಲೀಲ ಪದ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ.
ಖ್ಯಾತ ಚಿತ್ರನಟಿ ಅರುಣಿಮಾ ಘೋಷ್ ನೀಡಿರುವ ದೂರಿನ ಅನ್ವಯ ದಕ್ಷಿಣ ಕೋಲ್ಕತಾದ ಗಾರ್ಫಾ ಪ್ರದೇಶದ ನಿವಾಸಿ ಮುಖೇಶ್ ಶಾ ಎಂಬಾತನನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಮೇ 30ರಿಂದ ನಟಿಯ ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಅಶ್ಲೀಲ ಕಮೆಂಟ್ ಹಾಕಿ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ಮುಖೇಶ್ ಮೇಯುಖ್ ಹೆಸರಿನ ನಕಲಿ ಖಾತೆ ತೆರೆದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಯಾವ ಕಾರಣಕ್ಕಾಗಿ ಇದೆನ್ನೆಲ್ಲಾ ಮಾಡಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆತ ಮಾನಸಿಕವಾಗಿ ಆರೋಗ್ಯವಾಗಿದ್ದಾನೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ