ಬಾಲಿವುಡ್ ನಶೆ ನಂಟು: ನಿರ್ಮಾಪಕ ಇಮ್ತಿಯಾಜ್ ಖತ್ರಿ ಮನೆಗೆ ಎನ್ ಸಿಬಿ ದಾಳಿ
Team Udayavani, Oct 9, 2021, 9:43 AM IST
ಮುಂಬೈ: ಬಾಲಿವುಡ್ ನ ಮಾದಕ ಲೋಕದ ನಂಟಿನ ಗಂಟು ದಿನಕ್ಕೊಂದು ರೀತಿಯಲ್ಲಿ ಬಿಚ್ಚಿಕೊಳ್ಳುತ್ತಿದೆ. ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಬಂಧನ ಪ್ರಕರಣದ ನಡುವೆ ಇದೀಗ ಎನ್ ಸಿಬಿ ಅಧಿಕಾರಿಗಳು ಚಿತ್ರ ನಿರ್ಮಾಪಕ ಇಮ್ತಿಯಾಜ್ ಖತ್ರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮುಂಬೈ ನಗರದ ಬಾಂದ್ರಾ ಪ್ರದೇಶದಲ್ಲಿರುವ ನಿರ್ಮಾಪಕ ಇಮ್ತಿಯಾಜ್ ಖತ್ರಿ ಅವರ ನಿವಾಸ ಮತ್ತು ಕಚೇರಿಯಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಪರಿಶೀಲನೆ ನಡೆಸುತ್ತಿದೆ.
ಬಿಲ್ಡರ್ ಒಬ್ಬರ ಪುತ್ರನಾಗಿರುವ ಇಮ್ತಿಯಾಜ್ ಖತ್ರಿ ಬಾಲಿವುಡ್ ನೊಂದಿಗೆ ನಂಟು ಹೊಂದಿದ್ದಾರೆ. ಈ ಹಿಂದೆ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಅಂಟಿಕೊಂಡ ನಶೆ ಪ್ರಕರಣದಲ್ಲಿ ಇಮ್ತಿಯಾಜ್ ಖತ್ರಿ ಹೆಸರು ಕೇಳಿಬಂದಿತ್ತು. ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಶ್ರುತಿ ಮೋದಿ ಅವರ ವಿಚಾರಣೆಯ ಸಂದರ್ಭದಲ್ಲಿ ಹಲವು ಮಾಹಿತಿಗಳು ಹೊರ ಬಿದ್ದಿತ್ತು.
ಇದನ್ನೂ ಓದಿ:ಮತ್ತೆ ಎಫ್ ಬಿ, ಇನ್ಸ್ಟಾಗ್ರಾಮ್ ಸರ್ವರ್ ಡೌನ್: ಕ್ಷಮೆಯಾಚಿಸಿದ ಫೇಸ್ ಬುಕ್
ಸಿಬಿಐ ಅಧಿಕಾರಿಗಳ ಬಳಿ ಶ್ರುತಿ ಮೋದಿ ಅವರು ಸುಶಾಂತ್ ಸಿಂಗ್ ರಜಪೂತ್ ಗೆ ಇಮ್ತಿಯಾಜ್ ಖತ್ರಿ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಸುಶಾಂತ್ ಸಿಂಗ್ ಮಾತ್ರವಲ್ಲದೆ ಇತರ ಬಾಲಿವುಡ್ ಸೆಲೆಬ್ರೆಟಿಗಳಿಗೂ ಖತ್ರಿ ಡ್ರಗ್ ಪೂರೈಕೆ ಮಾಡುತ್ತಿದ್ದರು ಎಂಬ ಮಾಹಿತಿ ವಿಚಾರಣೆ ಸಂದರ್ಭ ಹೊರಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?