ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ
Team Udayavani, Sep 11, 2020, 10:41 PM IST
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ.
ಇನ್ಮೇಲೆ ರಿಯಾಗೆ ಚಾಪೆನೇ ಗತಿ?
ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, ಬೆಡ್ ಇಲ್ಲ ಎಂದು ಹೇಳಲಾಗುತ್ತಿದೆ. ಸದ್ಯ ಜೈಲಿನಲ್ಲಿ ರಿಯಾಗೆ ಮಲಗಲು ಚಾಪೆ ನೀಡಲಾಗಿದೆ. ಆದರೆ ಹಾಸಿಗೆ ಮತ್ತು ದಿಂಬು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಸೆಲ್‌ನಲ್ಲಿ ಫ್ಯಾನ್ ಇಲ್ಲ ಎಂದು ತಿಳಿಸಿರುವ ಅಧಿಕಾರಿಗಳು ಕೋರ್ಟ್ ಒಪ್ಪಿದರೆ ಟೇಬಲ್ ಫ್ಯಾನ್ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಶೀನಾ ಪಕ್ಕದಲ್ಲೇ ರಿಯಾ ವಾಸ
ಯುವ ನಟ ಸುಶಾಂತ್ ಸಿಂಗ್ ರಜಪೂತ್ ತನಿಖೆಯಿಂದ ಗಮನ ಸೆಳೆದಿರುವ ರಿಯಾ ಸೆಲ್ ಪಕ್ಕದಲ್ಲೇ ಶೀನಾ ಬೋರಾ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಇಂದ್ರಾಣಿ ಮುಖರ್ಜಿ ಸೆಲ್ ಇದೆಯಂತೆ.
ಹಲ್ಲೆಯ ಭೀತಿ
ಆತಂಕಕಾರಿ ವಿಚಾರವೆಂದರೆ ಸುಶಾಂತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಿಯಾ ಮೇಲೆ ಸಹ ಕೈದಿಗಳು ಹಲ್ಲೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ನಟಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೂರು ಶಿಫ್ಟ್ ನಲ್ಲಿ ಇಬ್ಬರು ಕಾನ್‌ಸ್ಟೇಬಲ್ ಗಳು ನಟಿಗೆ ರಕ್ಷಣೆ ನೀಡುತ್ತಿದ್ದಾರೆ. ಇನ್ನು ಸೆಪ್ಟೆಂಬರ್ 22ರವರೆಗೆ ರಿಯಾಗೆ ನ್ಯಾಯಾಂಗ ಬಂಧನವಿದ್ದು, ರಿಯಾ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ.
ಇಲ್ಲಿಯವರಿಗಿನ ಪ್ರಕರಣದ ಬೆಳವಣಿಗೆ
ಜೂನ್ 14 ರಂದು ಮೃತಪಟ್ಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಗೆ ಸಂಬಂಧಿಸಿದ ಡ್ರಗ್ಸ್ ಆರೋಪದ ಮೇಲೆ ನಟಿ ರಿಯಾ ಚಕ್ರವರ್ತಿಯನ್ನು ಮಂಗಳವಾರ ಬಂಧಿಸಿ 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಸಾವನ್ನಪ್ಪಿದ ನಟ ಸುಶಾಂತ್‌ಗೆ ರಿಯಾ ಚಕ್ರವರ್ತಿ ಗಾಂಜಾ ಸೇವನೆ ಮಾಡಲು ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್‌ಸಿಬಿ ಅಧಿಕಾರಿಗಳು ರಿಯಾಳನ್ನು ಬಂಧಿಸಿತ್ತು. ಅನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಾಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಾದವನ್ನು ಆಲಿಸಿದ್ದ ಕೋರ್ಟ್, ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ತೀರ್ಪು ಬಂದಿದ್ದು, ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ