OMG2: ಅಕ್ಷಯ್ ಕುಮಾರ್ ʼಓ ಮೈ ಗಾಡ್ -2ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Team Udayavani, Oct 3, 2023, 11:12 AM IST
ಮುಂಬಯಿ: ಅಕ್ಷಯ್ ಕುಮಾರ್ ಅವರಿಗೆ ಹಿಟ್ ತಂದುಕೊಟ್ಟ ʼಓ ಮೈ ಗಾಡ್-2ʼ ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.
ಆಗಸ್ಟ್ 11 ರಂದು ಥಿಯೇಟರ್ ನಲ್ಲಿ ತೆರೆಕಂಡ ʼಓಮೈಗಾಡ್-2ʼ ಪ್ರೇಕ್ಷಕರ ಮನಗೆದ್ದಿತ್ತು. ರಿಲೀಸ್ ಮೊದಲು ಸಾಕಷ್ಟು ಸುದ್ದಿಯಲ್ಲಿದ್ದ ಸಿನಿಮಾ ರಿಲೀಸ್ ಬಳಿಕ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಮಾಯಿ ಮಾಡಿತ್ತು. ಇದರ ಜೊತೆ ಅಕ್ಷಯ್ ಕುಮಾರ್ ಅವರಿಗೆ ಒಂದು ಹಿಟ್ ತಂದುಕೊಟ್ಟಿತು.
ಅಮಿತ್ ರೈ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಶಿವನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಲೈಂಗಿಕ ಶಿಕ್ಷಣದ ಕಥಾಹಂದರವನ್ನು ಸಿನಿಮಾ ಒಳಗೊಂಡಿದೆ.
ಇದೀಗ ಸಿನಿಮಾ ಓಟಿಟಿ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಇದೇ ತಿಂಗಳ ಅಂದರೆ ಅಕ್ಟೋಬರ್ 8 ರಂದು ಸಿನಿಮಾ ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
‘OMG 2’ ನಲ್ಲಿ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಮತ್ತು ರಾಮಾಯಣ ಖ್ಯಾತಿಯ ಅರುಣ್ ಗೋವಿಲ್ ಕೂಡ ಕಾಣಿಸಿಕೊಂಡಿದ್ದಾರೆ.
ʼಓಮೈಗಾಡ್ -2 ಸಿನಿಮಾ ಸನ್ನಿ ಡಿಯೋಲ್ ಅವರ ʼಗದರ್-2ʼ ಯೊಂದಿಗೆ ಪೈಪೋಟಿ ಆಗಿ ರಿಲೀಸ್ ಆಗಿತ್ತು. ಎರಡೂ ಸಿನಿಮಾ ಕೂಡ ಈ ವರ್ಷ ಬಿಟೌನ್ ಹಿಟ್ ಲಿಸ್ಟ್ ಗೆ ಸೇರಿದೆ.
We’ve got great news for you, and OMG can you tell we’re 2 excited? #OMG2 arrives 8 October, on Netflix! pic.twitter.com/1XLpd1sVej
— Netflix India (@NetflixIndia) October 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?