Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ
Team Udayavani, Oct 3, 2023, 6:55 PM IST
ಮುಂಬಯಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ ಆಶ್ಲೀಲ ವಿಡಿಯೋ ಹಂಚಿಕೆ ಹಾಗೂ ನಿರ್ಮಾಣದ ಪ್ರಕರಣದಿಂದ ಜೈಲು ಪಾಲಾಗಿದ್ದರು. ಅಂದಿನಿಂದ ಇಂದಿನವರೆಗೂ ರಾಜ್ ಕುಂದ್ರಾ ಮಾಸ್ಕ್ ಧರಿಸಿಕೊಂಡೇ ಸಾರ್ವಜನಿಕರ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ.
ಇದೀಗ ಉದ್ಯಮಿ ಹಾಗೂ ನಿರ್ಮಾಪಕ ರಾಜ್ ಕುಂದ್ರಾ ಅವರು ಮುಂಬೈನ ಆರ್ಥರ್ ಜೈಲಿನಲ್ಲಿದ್ದ ದಿನಗಳ ಸುತ್ತ ಸಿನಿಮಾವೊಂದು ಬರಲಿದೆ ಎನ್ನುವ ಮಾತು ಸಿನಿವಲಯದಲ್ಲಿ ಹರಿದಾಡುತ್ತಿದೆ. ರಾಜ್ ಕುಂದ್ರಾ ಅವರು ಜೈಲಿನಲ್ಲಿರುವ ದಿನಗಳ ಕುರಿತಾದ ಕಥೆಯನ್ನು ಈ ಸಿನಿಮಾ ಒಳಗೊಳ್ಳಲಿದೆ ಎನ್ನಲಾಗಿದೆ.
ಸೆಪ್ಟೆಂಬರ್ 2021 ರಲ್ಲಿ ಆಶ್ಲೀಲ ವಿಡಿಯೋ ನಿರ್ಮಾಣ ಹಾಗೂ ವಿತರಣೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದರು. ಕೆಲ ದಿನಗಳ ಕಾಲ ರಾಜ್ ಕುಂದ್ರಾ ಈ ಪ್ರಕರಣಕ್ಕೆ ಸಂಬಂಧ ಜೈಲಿನಲ್ಲಿದ್ದರು.
ಜೈಲು ಹಾಗೂ ಜಾಮೀನು ಸಿಗುವವರೆಗಿನ ದಿನಗಳ ಕಥೆಯನ್ನು ಆಧಾರಿಸಿ ಸಿನಿಮಾವೊಂದು ಬರಲಿದೆ. ಈ ಸಿನಿಮಾದಲ್ಲಿ ರಾಜ್ ಕುಂದ್ರಾ ಪ್ರಧಾನ ಪಾತ್ರದಲ್ಲಿ ನಟಿಸುತ್ತಿಲ್ಲ. ಅವರು ಕಥೆ, ಸ್ಕ್ರಿಪ್ಟ್ ಹಾಗೂ ಶೂಟಿಂಗ್ ವರೆಗಿನ ಎಲ್ಲಾ ಕೆಲಸದಲ್ಲಿ ಜೊತೆಯಾಗಿರಲಿದ್ದಾರೆ ಎಂದು ವರದಿ ತಿಳಿಸಿದೆ.
ಕೆಲವೊಂದು ಮೂಲಗಳ ಪ್ರಕಾರ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಆದರೆ ಮುಖ್ಯ ಪಾತ್ರದಲ್ಲಿ ಅಲ್ಲ ಎನ್ನಲಾಗಿದೆ.
ಮುಂದಿನ ವರ್ಷ ಈ ಸಿನಿಮಾ ಸಟ್ಟೇರಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?