‘ಡಬಲ್ ಇಸ್ಮಾರ್ಟ್’ ಹಿಂದೆ ಪುರಿ ಜಗನ್ನಾಥ್
Team Udayavani, May 15, 2023, 4:36 PM IST
ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಿರ್ದೇಶಕ ಪುರಿ ಜಗನ್ನಾಥ್ ಮತ್ತೂಮ್ಮೆ ಒಂದಾಗಿದ್ದಾರೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ಗೆ ಕೈ ಹಾಕಿದ್ದಾರೆ. ಚಿತ್ರದ ಟೈಟಲ್ ಹಾಗೂ ರಿಲೀಸ್ ಡೇಟ್ ಅನ್ನು ತಂಡ ಅನೌನ್ಸ್ ಮಾಡಿದೆ. ಪುರಿ ಜಗನ್ನಾಥ್ ಈ ಚಿತ್ರಕ್ಕೆ ಡಬಲ್ ಇಸ್ಮಾರ್ಟ್ ಎಂಬ ಶೀರ್ಷಿಕೆ ಇಟ್ಟಿದ್ದಾರೆ. 2024 ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.
ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್$Õ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ.
ಡಬಲ್ ಇಸ್ಮಾರ್ಟ್ ಪೋಸ್ಟರ್ನಲ್ಲಿ ರಾಮ್ ಪೋತಿನೇನಿ ರಕ್ತದ ಗುರುತುಗಳ ತ್ರಿಶೂಲ್ ಹಿಡಿದು ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್