
ಸಲ್ಮಾನ್ ಖಾನ್ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ
Team Udayavani, Oct 13, 2021, 3:53 PM IST

ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಇದೀಗ ಮತ್ತೊಂದು ಬಾಲಿವುಡ್ ಚಿತ್ರದಿಂದ ಆಫರ್ ಬಂದಿದೆ. ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಿರ್ಮಿಸಿ ನಟಿಸುತ್ತಿರುವ ‘ಅಂತಿಮ್’ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನಿರ್ದೇಶಿಸುತ್ತಿದ್ದಾರೆ.
ಈ ಕುರಿತು ಸ್ವತಃ ರವಿ ಬಸ್ರೂರ್ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ”ಭಾರತದ ಬಾಯಿಜಾನ್ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುತ್ತಿರುವುದು ಬಹಳ ಸಂತಸ ತಂದಿದೆ. ಸಲ್ಮಾನ್ ಖಾನ್ ಅವರ ಈ ಚಿತ್ರದಲ್ಲಿ ಹಿನ್ನೆಲೆ ಸಂಗೀತ ಹಾಗೂ ಹಾಡುಗಳಿಗೆ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದೇನೆ. ಈ ನನ್ನ ಜರ್ನಿಗೆ ನಿಮ್ಮ ಬೆಂಬಲ ಹೀಗೆ ಇರಲಿ” ಎಂದು ಖುಷಿ ಹಂಚಿಕೊಂಡಿದ್ದಾರೆ.
ಇನ್ನು ಅಂತಿಮ್: ದಿ ಫೈನಲ್ ಟ್ರೂತ್ ಚಿತ್ರವನ್ನು ಮಹೇರ್ಶ ಮಂಜ್ರೆಕರ್ ನಿರ್ದೇಶಿಸುತ್ತಿದ್ದು, ಸಲ್ಮಾನ್ ಖಾನ್ ನಿರ್ಮಾಣ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಆಯುಷ್ ಶರ್ಮಾ ನಾಯಕನಾಗಿದ್ದು, ಪ್ರಗ್ಯಾ ಜೈಸ್ವಾಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಕನ್ನಡದ ಕೆಜಿಎಫ್ ಸಿನಿಮಾ ಬಳಿಕ ರವಿ ಬಸ್ರೂರ್ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಸ್ಯಾಂಡಲ್ವುಡ್‍ನ ಸಾಕಷ್ಟು ಸಿನಿಮಾಗಳು ಅವರ ಕೈಯಲ್ಲಿವೆ. ಇವುಗಳ ಜೊತೆಗೆ ಬಾಲಿವುಡ್‍ನಲ್ಲಿಯೂ ಬ್ಯುಝಿಯಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್ ಪತ್ನಿ ಆಯೀಷಾ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

10ಸಾವಿರ ಆದಿಪುರುಷ್ ಟಿಕೆಟ್‌ಗಳನ್ನು ಫ್ರೀಯಾಗಿ ನೀಡಲು ಮುಂದಾದ ಕಾಶ್ಮೀರ್ ಫೈಲ್ಸ್ ನಿರ್ಮಾಪಕ

ದೇಗುಲದ ಮುಂದೆ ʼಆದಿಪುರುಷ್ʼ ನಟಿಗೆ ಮುತ್ತು ಕೊಟ್ಟ ನಿರ್ದೇಶಕ: ಬಿಜೆಪಿ ನಾಯಕ ಕೆಂಡಾಮಂಡಲ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್ – ಸ್ವರಾ ಭಾಸ್ಕರ್ ದಂಪತಿ: Baby Bump ಫೋಟೋ ವೈರಲ್
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
