ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆರ್ಆರ್ಆರ್
ಹಾಲಿವುಡ್ ಫಾರಿನ್ ಪ್ರೆಸ್ ಅಸೋಸಿಯೇಷನ್ ನಿಂದ ಪ್ರಕಟಣೆ
Team Udayavani, Dec 12, 2022, 8:38 PM IST
ಹೊಸದಿಲ್ಲಿ: ಎಸ್. ಎಸ್. ರಾಜಮೌಳಿ ಅವರ ನಿರ್ದೇಶನದ ಆಕ್ಷನ್ ಚಿತ್ರ “ಆರ್ಆರ್ಆರ್” ಇಂಗ್ಲಿಷ್ ಹೊರತಾದ ಭಾಷಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.
ಹಾಲಿವುಡ್ ಫಾರಿನ್ ಪ್ರೆಸ್ ಅಸೋಸಿಯೇಷನ್ (HFPA) ಸೋಮವಾರ ಸಂಜೆ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ನ ಅಧಿಕೃತ ಟ್ವಿಟರ್ ಪುಟದಲ್ಲಿ ಪ್ರಕಟಣೆಯನ್ನು ಹಂಚಿಕೊಂಡಿದೆ.
ಪ್ಯಾನ್-ಇಂಡಿಯಾ ಬ್ಲಾಕ್ ಬಸ್ಟರ್ “RRR”, , ಕೊರಿಯನ್ ರೊಮ್ಯಾಂಟಿಕ್ ಮಿಸ್ಟರಿ ಚಲನಚಿತ್ರ “ಡಿಸಿಷನ್ ಟು ಲೀವ್”, ಜರ್ಮನ್ ಯುದ್ಧ-ವಿರೋಧಿ ಚಿತ್ರ “ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್”, ಅರ್ಜೆಂಟೀನಾದ ಐತಿಹಾಸಿಕ “ಅರ್ಜೆಂಟೀನಾ 1985″ ಮತ್ತು ಫ್ರೆಂಚ್- ಡಚ್ ” ಕ್ಲೋಸ್ ” ನಾಮನಿರ್ದೇಶನಗೊಂಡಿವೆ.
ತೆಲುಗು ಮೂಲ ಭಾಷೆಯ ಚಲನಚಿತ್ರವನ್ನು ರಾಜಮೌಳಿ ನಿರ್ದೇಶಿಸಿದ್ದು, ವಿ. ವಿಜಯೇಂದ್ರ ಪ್ರಸಾದ್ ಅವರೊಂದಿಗೆ ಸಹ-ಕಥೆಗಾರ ರಾಗಿ ಕೆಲಸ ಮಾಡಿದ್ದಾರೆ. ಇದನ್ನು ಡಿವಿವಿ ಎಂಟರ್ಟೈನ್ಮೆಂಟ್ನ ಡಿವಿವಿ ದಾನಯ್ಯ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಜೂನಿಯರ್ ಎನ್ ಟಿಆರ್ , ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್, ಶ್ರಿಯಾ ಸರನ್, ಅಲಿಸನ್ ಡೂಡಿ ಮತ್ತು ಒಲಿವಿಯಾ ಮೋರಿಸ್ ಮೊದಲಾದ ಖ್ಯಾತ ನಟರು ನಟಿಸಿದ್ದಾರೆ.
Congratulations to the nominees for Best Picture – Non-English Language
✨ All Quiet on the Western Front
✨ Argentina, 1985
✨ Close
✨ Decision to Leave
✨ RRR#GoldenGlobes pic.twitter.com/DfNs0VQbIs— Golden Globe Awards (@goldenglobes) December 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ